ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದಲ್ಲಿ ಫೆ. 24 ರಿಂದ ಬಿಜೆಪಿ ಪ್ರಗತಿ ರಥಯಾತ್ರೆ

Twitter
Facebook
LinkedIn
WhatsApp
bjp16432663871672589837

ಬೆಂಗಳೂರು(ಫೆ.22):  ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳ ಸಾಧನೆಯನ್ನು ಪ್ರತಿ ಗ್ರಾಮ ಮತ್ತು ಬೂತ್‌ಗೆ ತಲುಪಿಸುವ ಉದ್ದೇಶದಿಂದ ಇದೇ ತಿಂಗಳ 24 ರಿಂದ (ಶುಕ್ರವಾರ) ‘ಪ್ರಗತಿ ರಥ’ಗಳು ರಾಜ್ಯಾದ್ಯಂತ ಸಂಚಾರ ಆರಂಭಿಸಲಿವೆ. ಪ್ರಗತಿ ರಥಕ್ಕಾಗಿ ಎಲ್‌ಇಡಿ ಸ್ಕ್ರೀನ್‌ ಇರುವ 135 ವಾಹನಗಳನ್ನು ಸಿದ್ಧಪಡಿಸಲಾಗಿದ್ದು, ಇವು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ 58 ಸಾವಿರಕ್ಕೂ ಹೆಚ್ಚು ಬೂತ್‌ಗಳಲ್ಲಿ ಸಂಚರಿಸಲಿವೆ. ರಥದ ಮೂಲಕ ಸಾಧನೆಗಳ ವಿಡಿಯೋ ಪ್ರದರ್ಶನ ನಡೆಯಲಿದೆ. ಕಾರ್ನರ್‌ ಮೀಟಿಂಗ್‌, ಭಾಷಣ ಮಾಡಲು ಮೈಕ್‌, ಸ್ಪೀಕರ್‌, ಲೈವ್‌ ಸ್ಟ್ರೀಮ್‌ ಮಾಡಲು ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

24ರಂದು ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಈ ಪ್ರಗತಿ ರಥಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಪ್ರತಿ ಕಡೆ 10 ಸಾವಿರ ಜನರ ಸಲಹೆ ನಿರೀಕ್ಷೆ:

ಈ ರಥಗಳನ್ನು ಗಮನಿಸಲು ಜಿಪಿಎಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಜೆಪಿ ಬ್ರ್ಯಾಂಡಿಂಗ್‌ ಮೂಲಕ ರಥ ಸಂಚರಿಸಲಿದೆ. ಸಲಹಾ ಪೆಟ್ಟಿಗೆಯನ್ನೂ ಈ ರಥ ಒಳಗೊಂಡಿರುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಜನರ ಸಲಹೆ ನಿರೀಕ್ಷಿಸಲಾಗಿದೆ. ಒಟ್ಟು 22.40 ಲಕ್ಷ ಸಲಹೆಗಳ ನಿರೀಕ್ಷೆ ಇದೆ. ಕ್ಯೂ ಆರ್‌ ಕೋಡ್‌ ಕೂಡ ಇದೆ ಎಂದು ಈ ಪ್ರಗತಿ ರಥದ ರಾಜ್ಯ ಸಂಚಾಲಕ ಎಸ್‌.ವಿ.ರಾಘವೇಂದ್ರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಒಂದು ರಥವು ಕನಿಷ್ಠ 15 ದಿನಗಳ ಕಾಲ ಒಂದು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಕರಾವಳಿ ಮತ್ತಿತರ ಕಡೆ ದೂರದೂರದ ಪ್ರದೇಶಗಳನ್ನು ಭೇಟಿ ಮಾಡಲು ಪ್ರತಿ ಕ್ಷೇತ್ರಕ್ಕೆ ಒಂದು ರಥ ಇರಲಿದೆ. ಬೆಂಗಳೂರಿನಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಒಂದು ರಥ ನೀಡಲಾಗುತ್ತಿದೆ ಎಂದರು.

ಏನು ಪ್ರಚಾರ?:

33 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ನೀರು, ವಿದ್ಯುತ್‌, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರು., ಕಳಸಾ-ಬಂಡೂರಿ ಯೋಜನೆಗೆ ಹಣ, ಬೆಳಗಾವಿ-ಕಿತ್ತೂರು ರೈಲ್ವೆ ಕಾಮಗಾರಿ, ಬೆಂಗಳೂರು ಅಭಿವೃದ್ಧಿ ಸೇರಿ ವಿವಿಧ ಯೋಜನೆಗಳ ಕುರಿತು ತಿಳಿಸಲಿದ್ದೇವೆ. ಯುಪಿಎ ಸರ್ಕಾರ ಕೊಟ್ಟಹಣಕ್ಕಿಂತ 9 ಪಟ್ಟು ಹೆಚ್ಚು ಹಣವನ್ನು ರೈಲ್ವೆಗೆ ನೀಡಿದ್ದು, ಕೊಪ್ಪಳದಲ್ಲಿ ಕುಶಲಕರ್ಮಿಗಳಿಗೆ ನೆರವು, ನಾಲ್ಕು ಸಾವಿರ ಕಿ.ಮೀ ಹೆದ್ದಾರಿಗಳ ಅಭಿವೃದ್ಧಿ ಕುರಿತಂತೆ ವಿವರಗಳು ಇರಲಿವೆ ಎಂದು ವಿವರ ನೀಡಿದರು.

ಕಾರ್ಯಕ್ರಮದ ಸಹ ಸಂಚಾಲಕರನ್ನಾಗಿ ಮಂಗಳೂರಿನ ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಮತ್ತು ಬೆಂಗಳೂರು ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist