ಶುಕ್ರವಾರ, ಮೇ 3, 2024
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದ ಜನ ಬದಲಾವಣೆ ಬಯಸಿದ್ದಾರೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
file758cmdz9zkgjw4ydp2z1564081321

ಮುಧೋಳ(ಮಾ.01): ನುಡಿದಂತೆ ನಡೆದ ಕಾಂಗ್ರೆಸ್‌ ಪಕ್ಷದ ಮೇಲೆ ತಾವೆಲ್ಲರೂ ವಿಶ್ವಾಸವಿಟ್ಟು ಗೆಲ್ಲಿಸಿ ಮತ್ತೆ ಅಧಿಕಾರಕ್ಕೆ ತಂದರೆ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು, ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರು.2 ಸಾವಿರ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಸೋಮವಾರ ಸಂಜೆ ಸ್ಥಳೀಯ ವೀರಶೈವ ಕಲ್ಯಾಣ ಮಂಟಪದ ಹೊರಾಂಗಣದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ನ್ನು ಬಿಡುಗಡೆಗೊಳಿಸಿ ಮಾತನಾಡಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ರಾಜ್ಯದ ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ, ಭ್ರಷ್ಟಾಚಾರ ದಿಂದ ತುಂಬಿ ತುಳುಕುತ್ತಿದೆ, ಜನರ ನಿರೀಕ್ಷೆಗಳು ಹುಸಿಯಾಗಿವೆ, ಚುನಾವಣೆ ಸಂದರ್ಭದಲ್ಲಿ ಬಿಡುಗಡೆಗೊಳಿಸಿದ ಪ್ರಣಾಳಿಕೆಯಲ್ಲಿ ಹೇಳಲಾದ ಭರವಸೆಗಳು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಇದರಿಂದ ರಾಜ್ಯದ ಜನರು ಬೇಸತ್ತು ಹೋಗಿದ್ದಾರೆ ಹೀಗಾಗಿ ಮತದಾರರು ಬದಲಾವಣೆಯನ್ನು ಬಯಸಿದ್ದಾರೆಂದು ಹೇಳಿದರು.

ಮುಧೋಳ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷವು ಯಾರಿಗಾದರೂ ಟಿಕೇಟ್‌ ನೀಡಲಿ ಅವರನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ಕೆಲಸ ತಮ್ಮದಾಗಬೇಕು, ಟಿಕೇಟ್‌ ಆಕಾಂಕ್ಷಿಗಳು ಎಲ್ಲ ರಿತೀಯ ಭಿನ್ನಾಭಿಪ್ರಾಯವನ್ನು ಬಿಟ್ಟು ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರಮಾಣ ಮಾಡಿದ್ದಾರೆ ಅದರಂತೆ ತಾವೂ ಕೂಡಾ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಮಾಜಿ ಸಚಿವರಾದ ಎಮ್‌.ಬಿ.ಪಾಟೀಲ, ಎಸ್‌.ಆರ್‌.ಪಾಟೀಲ, ಅಜಯಕುಮಾರ ಸರನಾಯಕ, ಸತೀಶ ಜಾರಕಿಹೊಳಿ, ಜಮೀರ ಅಹ್ಮದಖಾನ್‌ ಮಾತನಾಡಿ ಈ ಚುನಾವಣೆಯಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ, ಸಿದ್ದರಾಮಯ್ಯನವೇ ನಮ್ಮ ಮುಖ್ಯಮಂತ್ರಿಗಳಾಗಲಿದ್ದಾರೆ ಇದರಲ್ಲಿ ಯಾವುದೇ ಸಂಶಯವಿಲ್ಲವೆಂದರು, ಮುಧೋಳ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ದೂಳಿಪಟವಾಗಲಿದೆ, ಕಾಂಗ್ರೆಸ್‌ ಅಭ್ಯರ್ಥಿ ಯಾರೇ ಇರಲಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಮಾಜಿ ಸಚಿವ ಆರ್‌.ಬಿ.ತಿಮ್ಮಾಪೂರ ಮಾತನಾಡಿ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯಾಗಿಲ್ಲ, ಕ್ಷೇತ್ರದ ಮತ್ತು ರಾಜ್ಯದ ಅಭಿವೃದ್ದಿಯಾಗಬೇಕಾದರೆ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ತಾವುಗಳು ಕಾಂಗ್ರೆಸ್‌ ಪಕ್ಷದ ಸಂಘಟನೆಗೊಳಿಸಬೇಕೆಂದರು.

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಸತೀಶ ಬಂಡಿವಡ್ಡರ ಮಾತನಾಡಿ ನಾನು ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಬಂಡಿವಡ್ಡರ ಪೌಂಡೇಶನ್‌ ವತಿಯಿಂದ ಸಾಕಷ್ಟುಜನಪರ ಕೆಲಸ ಮಾಡುತ್ತಿದ್ದೇನೆ, ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ನಾನು ಸೋಲನ್ನು ಅನುಭವಿಸಿದ್ದೇನೆಂದು ಹೇಳಿದರು.

ಇದೆ ಸಂದರ್ಭದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ಮಾಜಿ ಸಚಿವರಾದ ಎಂ.ಬಿ.ಪಾಟೀಲ, ಸತೀಶ ಜಾರಕಿಹೊಳಿ, ಎಸ್‌.ಆರ್‌.ಪಾಟೀಲ, ಅಜಯಕುಮಾರ ಸರನಾಯಕ, ಜಮೀರ್‌ ಅಹ್ಮದ್‌ಖಾನ್‌, ಹೆಚ್‌.ವೈ.ಮೇಟಿ, ಉಮಾಶ್ರೀ, ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕರಾದ ಎಸ್‌.ಜಿ.ನಂಜಯ್ಯನಮಠ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ಕಾಂಗ್ರೆಸ್‌ ಮುಖಂಡರಾದ ವೀಣಾ ಕಾಶಪ್ಪನವರ, ಧರೆಪ್ಪ ಸಾಂಗ್ಲೀಕರ, ಅಶೋಕ ಕಿವಡಿ, ಉದಯಕುಮಾರ ಸಾರವಾಡ, ದಾನೇಶ ತಡಸಲೂರ, ಎಸ್‌.ಎಸ್‌. ಮಲಘಾಣ, ದಯಾನಂದ ಪಾಟೀಲ, ಸಂಜಯ ನಾಯಕ, ರಾಜೂಗೌಡ ಪಾಟೀಲ, ಹೆಚ್‌.ಎ.ಕಡಪಟ್ಟಿ, ಕಾಶಿನಾಥ ಹುಡೇದ, ಪ್ರಕಾಶ ರಾಠೋಡ ಸೇರಿದಂತೆ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ