ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯು ಮೇ 28ರಂದು ನಡೆದಿದ್ದು, ಫಲಿತಾಂಶ ಇದೀಗ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ನಿರ್ಮಾಪಕ ಭಾ.ಮಾ ಹರೀಶ್ ಗೆಲುವು ಸಾಧಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಫಿಲ್ಮ್ ಚೇಂಬರ್ನ ಅಧ್ಯಕ್ಷ ಸ್ಥಾನಕ್ಕೆ ಭಾ.ಮಾ ಹರೀಶ್ ಹಾಗೂ ಸಾ. ರಾ ಗೋವಿಂದು ಸ್ಪರ್ಧಿಸಿದ್ದರು. ಇನ್ನು ಈ ಚುನಾವಣೆಯಲ್ಲಿ 400 ಮತಗಳ ಅಂತರದಿಂದ ಭಾ.ಮಾ ಹರೀಶ್ ಗೆಲುವಿನ ಪತಾಕೆ ಹಾರಿಸಿದ್ದಾರೆ. 796 ನಿರ್ಮಾಪಕರು, 301 ವಿತರಕರು, 679 ಪ್ರದರ್ಶಕರು ಮತದಾನದಲ್ಲಿ ಪಾಲ್ಗೊಂಡಿದ್ದರು
ಒಟ್ಟು 1,176 ಮತದಾನವಾಗಿದ್ದು, ಅದರಲ್ಲಿ 781 ಮತಗಳು ಭಾಮಾ ಹರೀಶ್ ಕಡೆಗೆ ಮುಖ ಮಾಡಿದೆ. ಇನ್ನು ಸಾ.ರಾ.ಗೋವಿಂದು ಅವರಿಗೆ ಕೇವಲ 378 ಮತಗಳು ಬಿದ್ದಿವೆ. ಈ ಮೂಲಕ ಭಾಮಾ ಹರೀಶ್, ಇನ್ನು ಮುಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಇನ್ನು ನಿರ್ಮಾಪಕರ ವಲಯದಿಂದ ಉಪಾಧ್ಯಕ್ಷರಾಗಿ ಜೈ ಜಗದೀಶ್ ಗೆಲುವು ಸಾಧಿಸಿದ್ದಾರೆ. ಅಷ್ಟೇ ಅಲ್ಲ ನಿರ್ಮಾಪಕರ ವಲಯದಿಂದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಟ ನಿರ್ಮಾಪಕ ಸುಂದರ್ ರಾಜ್ ಆಯ್ಕೆಯಾಗಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist