ಕರ್ನಾಟಕ ಚುನಾವಣೆ – ಏ.26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ (BJP) ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ.
ರಾಜ್ಯಕ್ಕೆ ಭೇಟಿ ನೀಡಲಿರುವ ಯೋಗಿ ಆದಿತ್ಯನಾಥ್, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಜೊತೆ ಡಿಸಿಎಂಗಳಾದ ಕೇಶವ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್ ಮತ್ತು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಚೌಧರಿ ಭೂಪೇಂದ್ರ ಸಿಂಗ್ ಕೂಡ ಆಗಮಿಸಲಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಯೋಗಿ ಟೀಂ ಮತಬೇಟೆ ನಡೆಸಲಿದೆ. ಸಾರ್ವಜನಿಕ ಸಭೆ ಮತ್ತು ಕಾರ್ನರ್ ಮೀಟಿಂಗ್‌ಗಳನ್ನು ನಡೆಸಲಿದ್ದಾರೆ.
ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಹೀಗಾಗಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಪರ ರ‍್ಯಾಲಿಗಳನ್ನು ನಡೆಸಿದ್ದಾರೆ