ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ(AICC) ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಬಹು ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ(Siddaramaiah) ಕ್ಷೇತ್ರ ಗೊಂದಲಕ್ಕೆ ಬ್ರೇಕ್ ಬಿದ್ದಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ. ಡಿ.ಕೆ ಶಿವಕುಮಾರ್ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕ್ರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಮಂಗಳೂರು – ಯು.ಟಿ ಖಾದರ್, ಮೂಡುಬಿದಿರೆ -ಮಿಥುನ್ ರೈ, ಬೆಳ್ತಂಗಡಿ – ರಕ್ಷಿತ್ ಶಿವರಾಂ, ಬಂಟ್ವಾಳ ರಾಮನಾಥ ರೈ , ಸುಳ್ಯ – ಕೃಷ್ಣಪ್ಪ ಜಿ, ಬೈಂದೂರು-ಗೋಪಾಲ ಫೂಜಾರಿ, ಕಾಪು-ವಿನಯ್ ಕುಮಾರ್ ಸೊರಕೆ, ಕುಂದಾಪುರ-ದಿನೇಶ್ ಹೆಗ್ಡೆ ಮೊಳಹಳ್ಳಿ ಟಿಕೆಟ್ ಲಭ್ಯವಾಗಿದೆ.