ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ U. T. Khader

Twitter
Facebook
LinkedIn
WhatsApp
ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ U. T. Khader

ಬೆಂಗಳೂರು: ಅಚ್ಚರಿಯ ರೀತಿಯಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.

ಸದ್ಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಗದಗ ಶಾಸಕ ಎಚ್.ಕೆ ಪಾಟೀಲ್, ಶಿರಾ ಶಾಸಕ ಟಿ.ಬಿ ಜಯಚಂದ್ರ, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಮತ್ತು ಮುದ್ದೇಬಿಹಾಳ ಶಾಸಕ ಸಿ.ಎಸ್ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಆದರೆ ಈ ಹಿರಿಯ ಶಾಸಕರು ಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದ್ದರು.

ಇದೀಗ ಅಚ್ಚರಿಯ ರೀತಿಯಲ್ಲಿ ಯು.ಟಿ ಖಾದರ್ ಹೆಸರು ಅಂತಿಮವಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಸ್ಪೀಕರ್ ಸ್ಥಾನ ಒಪ್ಪುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಖಾದರ್ ಕೂಡಾ ತನ್ನ ಒಪ್ಪಿಗೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಂಗಳವಾರ ಖಾದರ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯ್ಕೆಯಾದ ಕೇವಲ ಇಬ್ಬರು ಕಾಂಗ್ರೆಸ್ ಶಾಸಕರಲ್ಲಿ ಖಾದರ್ ಒಬ್ಬರು. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಯು ಟಿ ಖಾದರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ, ನಗರಾಭಿವೃದ್ಧಿ ಮತ್ತು ವಸತಿ ಖಾತೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ರಾಜಕೀಯ ವಿವರ
1990ರಲ್ಲಿ NSUI ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 1994 ರಿಂದ 1999ರ ವರೆಗೆ NSUI ಜಿಲ್ಲಾಧ್ಯಕ್ಷರಾಗಿ, 1999 ರಿಂದ 2001 ರ ವರೆಗೆ NSUI ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

2003 ರಲ್ಲಿ ಘಟಪ್ರಭ ದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ, 2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು. ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಚುನಾವಣಾ ರಾಜಕೀಯ
2008 ರಲ್ಲಿ ತಮ್ಮ ತಂದೆಯವರ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008,2013,2018 ಹಾಗೂ 2023 ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು.ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಗಳಿಸಿದರು.

2013ರ ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯ ನಿರ್ವಹಿಸಿದರು.ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ,ಬೈಕ್ ಅಂಬ್ಯುಲೆನ್ಸ್,108,ಆರೋಗ್ಯಶ್ರೀ,ದಂತ ಭಾಗ್ಯ,ಸರಕಾರೀ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ,ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಕೂಡ ತನ್ನದಾಗಿಸಿ ಕೊಂಡಿದ್ದರು.

ನಂತರ 2016 ರಿಂದ 2018 ರ ತನಕ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ,ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಕ್ರಾಂತಿಕಾರಿ ಯೋಜನೆಗೆ ಚಾಲನೆ ನೀಡಿ ಇತಿಹಾಸ ಸೃಷ್ಟಿಸಿದರು.ಬಿಪಿಎಲ್ ಕಾರ್ಡು ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018 ರ ಮೈತ್ರಿ ಸರಕಾರದಲ್ಲಿ ನಗರಾಭಿವ್ರಿದ್ದಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿ ಯಶಶ್ವಿಯಾದರು.ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ,ಕರ್ನಾಟಕ ನಗರನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ,ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ,ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023 ರ ವರೆಗೆ ಕಾರ್ಯ ನಿರ್ವಹಿಸಿ ಪ್ರತೀ ಹಂತದಲ್ಲೂ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸೈ ಎನಿಸಿ ಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist