ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಲಬುರಗಿ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ

Twitter
Facebook
LinkedIn
WhatsApp
gstCCIUDHinduKSLU43816B3SR16068314380d1df434b 3a52 4716 a1cf 2b6d261f689c 1

ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ (Women Falls Down From Train) ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಹಳಿಗೆ ಬೀಳುವುದರಲ್ಲಿ ಕೂದಲೆಳೆಯಲ್ಲಿ ಬಚಾವ್ ಆಗಿದ್ದಾರೆ. ಈ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ 6.30ಕ್ಕೆ ನಡೆದಿದೆ. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಕಾಣುವಂತೆ, ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುತ್ತಿದ್ದಳು. ಈ ವೇಳೆ ಸಾಧ್ಯವಾಗದಿದ್ದಾಗ ಭದ್ರತಾ ಸಿಬ್ಬಂದಿ ಆಕೆಯನ್ನು ರೈಲಿಗೆ ಹತ್ತುವುದನ್ನು ತಡೆದು ಪಕ್ಕಕ್ಕೆ ಕೊಂಡೊಯ್ದರು. ಇದೇ ಹೊತ್ತಿಗೆ ಹಿಂಬದಿಯಲ್ಲಿ ಸುಮಾರು 50 ವರ್ಷದ ಮಹಿಳೆಯೊಬ್ಬರು ಅದೇ ರೈಲಿಗೆ ಹತ್ತಲು ಮುಂದಾಗಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಸಿನಿಮೀಯ ಶೈಲಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆಯನ್ನು ರಕ್ಷಣೆ ಮಾಡುವ ಸಾಹಸದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರ್‌ಪಿಎಫ್ ಪೇದೆ ಆರ್‌.ಡಿ ಶೇರಖಾನೆ ಮಹಿಳೆಯನ್ನು ರಕ್ಷಣೆ ಮಾಡಿದ ಸಿಬ್ಬಂದಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ