ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಲಾಪ ಬಹಿಷ್ಕರಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರುಗಳ ಪ್ರತಿಭಟನೆ!

Twitter
Facebook
LinkedIn
WhatsApp
istockphoto 1276740597 612x612 5

ಬೆಂಗಳೂರು, (ಜುಲೈ 20): ವಿಧಾನಸಭೆ ಕಲಾಪದ (Karnataka Assembly Session) ಸಂದರ್ಭ ಅತಿರೇಕದ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು (BJP MLAs) ಅಮಾನತು ಮಾಡಲಾಗಿದ್ದು, ಈ ಸಂಬಂಧ ರಾಜ್ಯಪಾಲ ಗೆಹ್ಲೋಟ್​​ಗೆ ದೂರು ನೀಡಲು ಬಿಜೆಪಿ ಶಾಸಕರು ತೀರ್ಮಾನಿಸಿದ್ದಾರೆ. ವಿಧಾನಸೌಧದಿಂದ ರಾಜಭವನದವರೆಗೂ ಪಾದಯಾತ್ರೆ ಮೂಲಕ ಹೋಗಿ ದೂರು ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಇಂದು, ನಾಳೆ ಉಭಯ​​​ ಕಲಾಪ ಬಹಿಷ್ಕರಿಸಲು ಬಿಜೆಪಿ ನಿರ್ಧಾರ ಮಾಡಿದೆ. ಈ ಬಗ್ಗೆ ಇಂದು(ಜುಲೈ 20) ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಎಂಎಲ್​, ಎಂಎಲ್​ಸಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಅಲ್ಲದೇ ಸ್ಪೀಕರ್​ ಯುಟಿ ಖಾದರ್ ನಡೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ.

ಬಿಜೆಪಿ ನಾಯಕರಿಂದ ಪ್ರತಿಭಟನೆ

ಇನ್ನು ಕಲಾಪವನ್ನು ಬಹಿಷ್ಕರಿಸಿ ಬಿಜೆಪಿ ಶಾಸಕರು ಪ್ರತಿಭಟನೆಗಿಳಿದಿದ್ದಾರೆ. ಬಸವರಾಜ ಬೊಮ್ಮಾಯಿ‌ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ಮಾಡುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರತಿಭಟನೆಯಲ್ಲಿ ಸುನೀಲ್​ ಕುಮಾರ್, ಆರಗ ಜ್ಞಾನೇಂದ್ರ, ಮುನಿರತ್ನ. ಸುರೇಶ್​ ಕುಮಾರ್​, ಭೈರತಿ ಬಸವರಾಜ್​ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರ್.ಅಶೋಕ್, ಸ್ಪೀಕರ್ ಪೀಠಕ್ಕೆ ಯು.ಟಿ.ಖಾದರ್​ ಅಗೌರವ ತೋರಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್​ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.

ಇನ್ನು ಸ್ಪೀಕರ್ ಯುಟಿ​ ಖಾದರ್ ಅವರು ಇಂದು ರಾಜ್ಯಪಾಲ ಗೆಹ್ಲೋಟ್​ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ತಪ್ಪು ಮಾಡಿದ್ದಾರೆ, ಅದಕ್ಕೆ ಗವರ್ನರ್ ಅವರನ್ನು ಭೇಟಿಯಾಗಿದ್ದಾರೆ. ಸ್ಪೀಕರ್​​ ಸರಿಯಾಗಿ ಇದ್ದಿದ್ರೆ ಯಾಕೆ ಗವರ್ನರ್​ ಭೇಟಿ ಆಗಬೇಕಿತ್ತು ಎಂದು ಪ್ರಶ್ನಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist