ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ: ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

Twitter
Facebook
LinkedIn
WhatsApp
images 6

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results 2023) ಪ್ರಕಟಗೊಂಡಿದ್ದು, ಕಾಂಗ್ರೆಸ್ (Congress) ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ (Basavaraj Bommai) ರಾಜೀನಾಮೆಗೆ ಮುಂದಾಗಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ 63,384 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಾಣ್ 44,394 ಮತಗಳನ್ನು ಪಡೆದಿದ್ದಾರೆ. ಆದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಅವರ ಆಡಳಿತದ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಲ್ಲಿ ಅಸಮಾಧನಗಳು ಎದ್ದಿದ್ದವು. ಕಠಿಣ ಕ್ರಮದ ಭರವಸೆ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು. ಕಾಂಗ್ರೆಸ್​ನ ಆರೋಪಗಳಿಗೆ ತಿರುಗೇಟು ನೀಡುವಲ್ಲಿ ವಿಫಲರಾಗಿದ್ದರು.

ಇಂದು ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತ ಪಡೆದುಕೊಂಡಿದೆ. 133 ಮ್ಯಾಜಿಕ್ ನಂಬರ್ ಆಗಿದೆ. ಈ ಪೈಕಿ ಕಾಂಗ್ರೆಸ್ 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಆಡಳಿತ ಪಕ್ಷ ಬಿಜೆಪಿ 60 + ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿದೆ. ಸದ್ಯ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ