ಕಾಂಗ್ರೆಸ್ನಲ್ಲಿ ಅರ್ಜಿ ಹಾಕದವರಿಗೂ ಟಿಕೆಟ್; ತೀರ್ಮಾನಿಸಿದ ಹೈಕಮಾಂಡ್!
ಬೆಂಗಳೂರು: ಕಾಂಗ್ರೆಸ್ ನಲ್ಲಿ ಅರ್ಜಿ ಸಲ್ಲಿಸದವರಿಗೂ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹೈಕಮಾಂಡ್ ಕೇವಲ ವಿಜಯಿ ಆಗುವ ಮಾನದಂಡವನ್ನು ಮಾತ್ರ ಅನುಸರಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಗುಜರಾತ್ ಹಾಗೂ ಹಿಮಾಚಲ್ ಪ್ರದೇಶ ಚುನಾವಣೆಯಲ್ಲಿ ಅರ್ಜಿ ಹಾಕದವರಿಗೂ ಕಾಂಗ್ರೆಸ್ ಟಿಕೆಟ್ ನೀಡಿತು. ಈ ಆಧಾರದ ಮೇಲೆ ಕರ್ನಾಟಕದಲ್ಲಿ ಟಿಕೆಟ್ ಗೆ ಅರ್ಜಿ ಸಲ್ಲಿಸದವರಿಗೂ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಹೈಕಮಾಂಡ್ ಮೂಲಗಳ ಪ್ರಕಾರ ಒಂದು ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಚುನಾವಣೆಯನ್ನು ಗೆಲ್ಲುವ ಸಾಮರ್ಥ್ಯ ಹೊಂದಿದ್ದರೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಅರ್ಜಿ ಮಾನದಂಡವಲ್ಲ ಎಂಬುದನ್ನು ಹೈಕಮಾಂಡ್ ಮೂಲಗಳು ಸ್ಪಷ್ಟಪಡಿಸಿವೆ.
ಇದನ್ನು ಈ ಮೊದಲು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮಾಧ್ಯಮದೊಂದಿಗೆ ಹೇಳಿಕೊಂಡಿದ್ದರು. ಅರ್ಜಿ ಹಾಕದವರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ಅವರು ಘೋಷಿಸಿದ್ದರು. ಈಗ ಬಂದಿರುವ ಮಾಹಿತಿಯ ಪ್ರಕಾರ ಕಾಂಗ್ರೆಸ್ ನಲ್ಲಿ ಅರ್ಜಿ ಸಲ್ಲಿಸಿದವರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗೆಲ್ಲುವ ಅಭ್ಯರ್ಥಿಯ ಕಡೆ ಗಮನ ಕೊಡಿ, ಅರ್ಜಿ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.