ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್‌ನ ಆರ್‌.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

Twitter
Facebook
LinkedIn
WhatsApp
ಕಾಂಗ್ರೆಸ್‌ನ ಆರ್‌.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ವಿಧಾನಸಭೆ(ಡಿ.29):  ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ, ಹಳಿಯಾಳದ ಹಾಲಿ ಶಾಸಕ ಆರ್‌.ವಿ.ದೇಶಪಾಂಡೆ ಅವರು ರಾಜ್ಯ ವಿಧಾನಸಭೆಯ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ವರ್ಷ ಅತ್ಯುತ್ತಮ ಪ್ರಶಸ್ತಿ ಪ್ರದಾನ ಸಂಪ್ರದಾಯ ಪುನಾರಂಭಿಸಿದ ಬಳಿಕ ಈ ಪ್ರಶಸ್ತಿಗೆ ಭಾಜನರಾದ ಎರಡನೇ ಶಾಸಕ ದೇಶಪಾಂಡೆ ಅವರಾಗಿದ್ದಾರೆ. ಕಳೆದ ವರ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮೊದಲ ಪ್ರಶಸ್ತಿ ಪಡೆದಿದ್ದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೇಶಪಾಂಡೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಘೋಷಿಸಿದರು. ಇಡೀ ಸದನದ ಎಲ್ಲ ಸದಸ್ಯರೂ ಮೇಜು ತಟ್ಟುವ ಮೂಲಕ ಅವರ ಆಯ್ಕೆಯನ್ನು ಸ್ವಾಗತಿಸಿದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಮಾಧುಸ್ವಾಮಿ ಸೇರಿದಂತೆ ಹಿರಿಯ ನಾಯಕರನ್ನು ತಮ್ಮ ಪೀಠದ ಬಳಿಗೆ ಆಹ್ವಾನಿಸಿ ಇಡೀ ಸದನದ ಸಮ್ಮುಖದಲ್ಲಿ ದೇಶಪಾಂಡೆ ಅವರಿಗೆ ಸ್ಪೀಕರ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಸ್ಪೀಕರ್‌ ಕಾಗೇರಿ, ‘ದೇಶಪಾಂಡೆ ಅವರು ಈ ಸದನ ಪ್ರವೇಶಿಸಿದಂದಿನಿಂದಲೂ ಸದನದ ಚೌಕಟ್ಟು ಮೀರದೆ ನಿಯಮಾವಳಿಗೆ ಬದ್ಧವಾಗಿ ನಡೆದುಕೊಂಡು ಬಂದ ಒಬ್ಬ ಮುತ್ಸದ್ಧಿ ನಾಯಕರು. ಸಾರ್ವಜನಿಕ ಜೀವನದ ಜತೆಗೆ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲೂ ತೊಡಗಿದವರು. ವಿಶೇಷವಾಗಿ ಶಿಕ್ಷಣ ಹಾಗೂ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದವರು’ ಎಂದು ಶ್ಲಾಘಿಸಿದರು.

ನನ್ನ ಇದುವರೆಗಿನ ಬೆಳವಣಿಗೆಗೆ ದೇವರು, ತಂದೆ ತಾಯಿ, ಕುಟುಂಬದವರ ಆಶೀರ್ವಾದ, ಸ್ನೇಹಿತರು, ಸಹಪಾಠಿಗಳ ಸಹಕಾರ ಕಾರಣ ಎಂದು ಆರ್‌.ವಿ. ದೇಶಪಾಂಡೆ ಕೃತಜ್ಞತೆ ಸಲ್ಲಿಸಿದರು. ‘ರಾಜಕಾರಣಿಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಿಂದೆ ಇದ್ದಂತ ಉತ್ತಮ ಅಭಿಪ್ರಾಯ, ಅಭಿಮಾನ ಈಗಿಲ್ಲ. ಪ್ರತಿಯೊಬ್ಬರೂ ಸ್ನೇಹಜೀವಿಗಳಾಗಿರಬೇಕು, ಯಾರನ್ನೂ ದ್ವೇಷ ಮಾಡಿ ಏನೂ ಸಾಧಿಸುವುದಿಲ್ಲ. ತಮ್ಮ ಸಹಪಾಠಿಗಳು ಯಾರಾದರೂ ಸಚಿವರಾದರೆ, ಮುಖ್ಯಮಂತ್ರಿ ಆದರೆ ಖುಷಿ ಪಡಬೇಕು ಎಂದು ದೇಶಪಾಂಡೆ ಹೇಳಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ನಾನು ಮತ್ತು ದೇಶಪಾಂಡೆ ಇಬ್ಬರೂ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದವರು. ನಾನು ಏಳು ಬಾರಿ ಶಾಸಕನಾಗಿದ್ದರೆ ದೇಶಪಾಂಡೆ ನನಗಿಂತ ಒಂದು ಬಾರಿ ಹೆಚ್ಚಿಗೆ 8 ಬಾರಿ ಶಾಸಕರಾಗಿ ಆಯ್ಕೆಯಾದವರು. ಒಮ್ಮೆ ಮಾತ್ರ ಸೋತ. ಹೇಗೆ ಸೋತ ಎಂಬುದು ನನಗೆ ಆಶ್ಚರ್ಯ. ನನಗಾದರೂ ರಾಜಕೀಯದಲ್ಲಿ ಶತ್ರುಗಳಿದ್ದಾರೆ. ಆದರೆ ಅವರು ಅಜಾತಶತ್ರು. ಕ್ರಿಯಾಶೀಲ ವ್ಯಕ್ತಿ ಮಾತ್ರವಲ್ಲ ತಾವು ವಹಿಸಿಕೊಂಡ ಎಲ್ಲ ಇಲಾಖೆಗಳಲ್ಲೂ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ನ್ಯಾಯ ಒದಗಿಸಿದವರು. ಅವರ ರಾಜಕೀಯ ಜೀವನ ಎಲ್ಲ ಹೊಸ ಶಾಸಕರಿಗೂ ಪ್ರೇರಣೆ ಆಗುತ್ತದೆ. ಈ ಬಾರಿಯ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಅವರ ಆಯ್ಕೆ ಉತ್ತಮವಾಗಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist