ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್: 6 ಆರೋಪಿಗಳ ಬಂಧನ

Twitter
Facebook
LinkedIn
WhatsApp
crime 2 1674843856

ಬೆಂಗಳೂರು: ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರವಿ ಅಲಿಯಾಸ್​ ಮತ್ತಿ ರವಿ ಕೊಲೆ(Bengaluru Congress Worker Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೇ.24ರ ಬುಧವಾರ ರಾತ್ರಿ 11 ಗಂಟೆಗೆ ಬೆಂಗಳೂರಿನ (Bengaluru)  ಲಗ್ಗೆರೆ ಸಮೀಪದ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೋಟೆಲ್ ಮುಂಭಾಗ ರವಿ ಅಲಿಯಾಸ್ ಮತ್ತಿ ರವಿಯನ್ನು ದುರ್ಷರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ನಂದಿನಿ ಲೇಔಟ್ ಠಾಣೆ ಪೊಲೀಸರು, ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಒಟ್ಟು ಆರು ಜನರನ್ನು ನಂದಿನಿ ಬಂಧಿಸಿದ್ದಾರೆ.

ಮತ್ತಿರವಿ ವೃತ್ತಿಯಲ್ಲಿ ಟೆಂಪೋ ಟ್ರಾವೆಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆದಾರನಾಗಿದ್ದ. ಮೇ.24ರ ಬುಧವಾರ ಸಂಜೆ ಕೆಲಸ ಮುಗಿಸಿದ ಬಳಿಕ ಬಾರ್‌ನಲ್ಲಿ ಮದ್ಯ ಸೇವಿಸಿ ಅದೇ ಏರಿಯಾದ ಕೃಷ್ಣಮೂರ್ತಿ ಎಂಬ ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಪಾರ್ಟಿ ಮುಗಿಸಿದ ಬಳಿಕ ಮನೆ ಕಡೆ ರವಿ ಹೊರಟಿದ್ದ, ಇದೇ ಸಮಯಕ್ಕೆ ಕಾದು ಕುಳಿತಿದ್ದ ಹಂತಕರು ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದರು. ತಪ್ಪಿಸಿಕೊಳ್ಳುವುದಕ್ಕಾಗಿ ರವಿ ಓಡಿದ್ದು, ಹಂತಕರು ಅಟ್ಟಾಡಿಸಿ ಹತ್ಯೆಗೈದಿದ್ದರು. ಅದಲ್ಲದೇ ಆತನ ತಲೆಯ ಮೇಲೆ ಸೈಜ್ ಕಲ್ಲು ಎತ್ತಾಕಿ ಪರಾರಿಯಾಗಿದ್ದರು.ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ಹಿನ್ನೆಲೆ

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದರು. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬಕ್ಕೆ ಹಾಜರಾಗಲು ರವಿ ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದರು. ಕೊನೆಗೆ ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದರು. ಸ್ಥಳಕ್ಕೆ ಆಗಮಿಸಿದ್ದ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಘಟನೆ ನಡೆದು ಐದು ದಿನಗಳಲ್ಲಿ ಕೊಲೆಗಾರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ