ಬುಧವಾರ, ಮೇ 8, 2024
ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ನಿಂದ ರಾಮನಗರದಲ್ಲಿ ನಿಖಿಲ್ ಸೋತಿದ್ದು! ಎಚ್ ಡಿ ಕುಮಾರಸ್ವಾಮಿ

Twitter
Facebook
LinkedIn
WhatsApp
Untitled 20

ಬೆಂಗಳೂರು: ಕಾಂಗ್ರೆಸ್ ಭರವಸೆ ನೀಡಿದ್ದ ಗ್ಯಾರಂಟಿ ಕಾರ್ಡ್ನಿಂದ ರಾಮನಗರದಲ್ಲಿ ನಿಖಿಲ್ ಸೋತಿದ್ದು! ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 42 ಕ್ಷೇತ್ರದಲ್ಲಿ 60 ಸಾವಿರ ಕಾರ್ಡ್ ಹಂಚಿಕೆ ಮಾಡಿದ್ದಾರೆ. ಗ್ಯಾರಂಟಿ ಕಾರ್ಡ್ ಜೊತೆ‌, ಐದು ಸಾವಿರ ರೂಪಾಯಿ ಗಿಫ್ಟ್ ಕಾರ್ಡ್ ಕೂಡಾ ಕೊಟ್ಟಿದ್ದಾರೆ. ರಾಮನಗರ, ಪಿರಿಯಾಪಟ್ಟಣ, ಆರ್.ಆರ್.ನಗರ,ಕುಣಿಗಲ್ ಸೇರಿದಂತೆ ಹಲವು ಕಡೆ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಪಾರದರ್ಶಕವಾದ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ ಯಾವ ರೀತಿ ಚುನಾವಣೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಅವರೇ ನೀವು ಎಷ್ಟು ಶೇಕಡಾವಾರು ಫಿಕ್ಸ್ ಮಾಡ್ತೀರಾ? ಇದಕ್ಕೆ ಉತ್ತರ ನೀಡುತ್ತೀರಾ? ಎಂದು ಪ್ರಶ್ನಿಸಿದರು.

ರಾಜ್ಯದ ಜನತೆ ಯಾವ ರೀತಿ ಮರಳು ಮಾಡಿದ್ದೀರಾ, ನಿರುದ್ಯೋಗ ಯುವಕರಿಗೆ 3 ಸಾವಿರ ರೂಪಾಯಿ ಕೊಡುತ್ತೇನೆ ಎಂದಿದ್ದರು. ಆದ್ರೆ‌ ಈಗ‌ 2022, 2023 ರ‌ ಸಾಲಿನ ನಿರುದ್ಯೋಗಿ ಯುವಕರಿಗೆ ಎಂದು ಹೇಳಿದ್ದಾರೆ. ಈ ಕಾರ್ಡ್ನಿಂದ ರಾಮನಗರದಲ್ಲಿ ನಿಖಿಲ್ ಸೋತಿದ್ದು, ನ್ಯಾಯದ ರೀತಿ ಸೋಲಿಸಿಲ್ಲ ಎಂದರು. ಲೋಕಸಭೆ ಚುನಾವಣೆ ಬಳಿಕ‌ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಇಲ್ವಾ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದರು.ಬಿಜೆಪಿ ಸರ್ಕಾರದ ಅಕ್ರಮ ತನಿಖೆ ಮಾಡ್ತಾ‌ ಇದ್ದಾರೆ. ಆದರೆ ಚುನಾವಣಾ ಸಂದರ್ಭದಲ್ಲಿ ಹಂಚಿದ ಕೂಪನ್ ಕಾರ್ಡ್‌ಗಳ ಬಗ್ಗೆ ತನಿಖೆ ಮಾಡ್ತೀರಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ನವರು ಐದು ಗ್ಯಾರಂಟಿ ಕಾರ್ಡ್ ಜಾರಿ ಮಾಡುವುದಿಲ್ಲ.‌ ಅಂದು ಸಿದ್ದರಾಮಯ್ಯ ಕರೆಂಟ್ ಫ್ರೀ ಅಂದಿದ್ದರು. ಇವಾಗ ಕಾಂಗ್ರೆಸ್ ಸರ್ಕಾರ ಷರತ್ತು ಹಾಕಿದರೆ ನಾವು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕಾಗಿ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ