ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಟಿಕೆಟ್ ಅರ್ಜಿ ಸ್ವೀಕಾರದಿಂದ 21.19 ಕೋಟಿ ದಾಖಲೆ ಮೊತ್ತ ಸಂಗ್ರಹ

Twitter
Facebook
LinkedIn
WhatsApp
ಕಾಂಗ್ರೆಸ್ ಟಿಕೆಟ್ ಅರ್ಜಿ ಸ್ವೀಕಾರದಿಂದ 21.19 ಕೋಟಿ ದಾಖಲೆ ಮೊತ್ತ ಸಂಗ್ರಹ

Karnataka Assembly Elections:  ವಿಧಾನಸಭಾ 2023ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಮಾರಾಟ, ಸ್ವೀಕಾರದಲ್ಲಿ ದಾಖಲೆ ಮಾಡಿದೆ. ಜೊತೆಗೆ ಠೇವಣಿಯಾಗಿ  21.19 ಕೋಟಿ ಮೊತ್ತ ಸಂಗ್ರಹ ಮಾಡುವ ಮೂಲಕವೂ ರಾಜಕೀಯ ಪಕ್ಷಗಳ ಹುಬ್ಬೇರುವಂತೆ ಮಾಡಿದೆ. ಕೆಪಿಸಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡುವ ಉದ್ದೇಶದಿಂದ ಅಕಾಂಕ್ಷಿ ಅಭ್ಯರ್ಥಿಗಳಿಂದ ಹಣವನ್ನು ಸಂಗ್ರಹ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ಎನ್ನಲಾಗಿದೆ. 

ಕೆಪಿಸಿಸಿ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಒಟ್ಟು 1311 ಮಂದಿ ಆಕಾಂಕ್ಷೆಗಳು ಟಿಕೆಟ್ ಗಾಗಿ ಅರ್ಜಿ ಪಡೆದಿದ್ದರು. ಆ ಪೈಕಿ 1230 ಅರ್ಜಿಗಳು ಸ್ವೀಕಾರವಾಗಿವೆ. ಇದರಲ್ಲಿ  ಸಾಮಾನ್ಯ ವರ್ಗದ 889 ಅರ್ಜಿಗಳು, ಎಸ್ ಟಿ, ಎಸ್ ಸಿ ವರ್ಗದಿಂದ 341 ಅರ್ಜಿಗಳನ್ನು ಭರ್ತಿ ಮಾಡಿ, ಡಿಡಿ ಪಡೆದು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ನವೆಂಬರ್ 1 ರಿಂದ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಅರ್ಜಿ ಸಲ್ಲಿಕೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಒಲವು ತೋರಿಸಿದ ಹಿನ್ನೆಲೆಯಲ್ಲಿ ನವೆಂಬರ್ 21 ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ ಮಾಡಲಾಯಿತು. ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸುವವರಿಗೆ ಇನ್ನಷ್ಟು ಕಾಲಾವಕಾಶ ನೀಡಲಾಗಿದೆ ಎಂಬ ಮಾಹಿಯಿ ಲಭ್ಯವಾಗಿದೆ.

ಸಾಮಾನ್ಯ ಆಕಾಂಕ್ಷಿಗಳಿಗೆ 2 ಲಕ್ಷ- ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 1 ಲಕ್ಷ ಮೊತ್ತ:
ಸಾಮಾನ್ಯ ವರ್ಗದ  ಆಕಾಂಕ್ಷಿ ಅಭ್ಯರ್ಥಿಗಳು ಅರ್ಜಿ ಮೊತ್ತ 5 ಸಾವಿರದ ಜೊತೆಗೆ ಎರಡು ಲಕ್ಷದ ಡಿಡಿ ಸಲ್ಲಿಕೆ ಮಾಡಬೇಕು. ಅದೇ ರೀತಿಯಲ್ಲಿ ಎಸ್ ಸಿ,‌ ಎಸ್ ಟಿ ಸಮುದಾಯದ ಆಕಾಂಕ್ಷಿಗಳಿಗೆ ಒಂದು ಲಕ್ಷ ರೂಪಾಯಿ ನಿಗದಿ ಪಡಿಸಲಾಗಿತ್ತು. ಈ ಮೂಲಕ ಸಾಮಾನ್ಯ ವರ್ಗದ ಆಕಾಂಕ್ಷಿಗಳಿಂದ 17.78 ಕೋಟಿ ಹಾಗೂ  ಎಸ್ ಸಿ, ಎಸ್ ಟಿ ಆಕಾಂಕ್ಷಿಗಳಿಂದ  3.41 ಕೋಟಿ ಮೊತ್ತ ಸಂಗ್ರಹವಾಗಿದೆ ಎಂದು ಕೆಪಿಸಿಸಿ ಮೂಲಗಳು ದೃಢಪಡಿಸಿವೆ.

ಕಟ್ಟಡ ನಿರ್ಮಾಣಕ್ಕೆ ಹಣ ಬಳಕೆ:
ಅರ್ಜಿ ಸಲ್ಲಿಕೆ ಮತ್ತು ಸ್ವೀಕಾರದಿಂದ ಸಂಗ್ರಹವಾಗಿರುವ ಮೊತ್ತವನ್ನು ಕೆಪಿಸಿಸಿ ನೂತನ ಕಟ್ಟಡ ಪೂರ್ಣಗೊಳಿಸಲು ಬಳಕೆ ಮಾಡುವ ಸಾಧ್ಯತೆ ಇದೆ. ಕೆಪಿಸಿಸಿ ಕಚೇರಿಯ ಹಿಂಭಾಗದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ. ಹಣಕಾಸು ಕೊರತೆ ಕಾರಣದಿಂದ ಕಾಮಗಾರಿ ಕುಟುಂತ್ತಾ ಸಾಗುತ್ತಿತ್ತು. ಇದೀಗ ಈ ಮೊತ್ತವನ್ನು ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ