ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

Twitter
Facebook
LinkedIn
WhatsApp
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು, ಈ ವರದಿಯಲ್ಲಿ ಮಂಗಳೂರು ಹಾಗೂ ಉಡುಪಿ ಲೋಕಸಭೆ ಗೆಲ್ಲುವ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ.

ಚುನಾವಣೆಯ ನಡುವಿನಲ್ಲಿ ಕಾಂಗ್ರೆಸ್ ತರಿಸಿಕೊಂಡಿದ್ದ ವರದಿಯ ಪ್ರಕಾರ ಕಾಂಗ್ರೆಸ್ಸಿಗೆ ಗೆಲ್ಲುವ ಸಾಧ್ಯತೆ ಮಂಗಳೂರು ಲೋಕಸಭೆಯಲ್ಲಿ ಇದೆ ಎನ್ನಲಾಗಿತ್ತು.

ಆದರೆ ಚುನಾವಣೆಯಲ್ಲಿ ಅಭ್ಯರ್ಥಿಯ ಪರವಾಗಿ ಸರಿಯಾದ ತಂತ್ರಗಾರಿಕೆ ಇಲ್ಲದೆ ಹೋಗಿದ್ದು, ಮಂಗಳೂರು ಲೋಕಸಭೆಯನ್ನು ಕಾಂಗ್ರೆಸ್ ಪಡೆದುಕೊಳ್ಳುವ ಸಾಧ್ಯತೆಯಿಂದ ಕಳೆದುಕೊಳ್ಳುವಂತಾಗಿದೆ ಎಂದು ಕೆಪಿಸಿಸಿ ಆಂತರಿಕ ವಲಯದಿಂದ ವರದಿಯಾಗಿದೆ.

ಅಲ್ಲದೆ ಚುನಾವಣೆಯ ಅನುಭವದ ಕೊರತೆ ಅಭ್ಯರ್ಥಿಯ ಪರವಾಗಿ ವ್ಯಾಪಕವಾಗಿ ಗೋಚರವಾಗಿದ್ದು ಈ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. ಅಲ್ಪಸಂಖ್ಯಾತರ ಅತ್ಯಧಿಕ ಮತಗಳು ಲೋಕಸಭೆ ಇತಿಹಾಸದಲ್ಲಿ ಚಲಾವಣೆಯಾಗಿದ್ದು ಇದು ದಾಖಲೆ ನಿರ್ಮಿಸಿದೆ ಎನ್ನಲಾಗಿದೆ. ಇದರ ಲಾಭವನ್ನು ಪಡೆಯಲು ಕಾಂಗ್ರೆಸ್ ವಿಫಲವಾಗಿದೆಯೇ? ಎಂಬ ಪ್ರಶ್ನೆಗಳು ಈಗ ಉದ್ಭವವಾಗಿದೆ.

ಮಂಗಳೂರಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿತ್ತು . ಆದರೆ ಆರಂಭದಿಂದಲೂ ನರೇಂದ್ರ ಮೋದಿಯವರ ಆಡಳಿತಾತ್ಮಕ ಶೈಲಿಯ ಬಗ್ಗೆ ಮಂಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಂಗಳೂರಿನ ಕಾಂಗ್ರೆಸ್ ನಾಯಕರು ಯಾವುದೇ ಚಕಾರ ಎತ್ತದೆ ಇರುವುದು ಸಹ ಕಾಂಗ್ರೆಸ್ಸಿಗೆ ಲಾಭಕ್ಕಿಂತ ನಷ್ಟ ತಂದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಬಿಜೆಪಿಯ ಪ್ರಮುಖ ರಾಜ್ಯಗಳಲ್ಲಿ ನರೇಂದ್ರ ಮೋದಿ ಹಿನ್ನಡೆ ಅನುಭವಿಸುತ್ತಿರುವ ವರದಿಗಳನ್ನು ಗಮನಿಸುತ್ತಿರುವ ರಾಜಕೀಯ ವಿಶ್ಲೇಷಕರು ಮಂಗಳೂರು ಲೋಕಸಭೆಯಲ್ಲಿ ನರೇಂದ್ರ ಮೋದಿಯ ಆಡಳಿತದ ವಿರುದ್ಧ ಅಭ್ಯರ್ಥಿ ಹಾಗೂ ಕಾಂಗ್ರೆಸ್ ನಾಯಕರು ಧ್ವನಿ ಎತ್ತುತ್ತಿದ್ದರೆ ಇತರ ರಾಜ್ಯಗಳಲ್ಲಿ ಆಗುತ್ತಿರುವ ಬದಲಾವಣೆಗಳು ಮಂಗಳೂರು ಲೋಕಸಭೆಯಲ್ಲೂ ಘಟಿಸಬಹುದಿತ್ತು ಎಂದು ಅಭಿಪ್ರಾಯ ಪಡುತ್ತಾರೆ.

ನರೇಂದ್ರ ಮೋದಿಯ ಬಗ್ಗೆ ಸಂಪೂರ್ಣವಾಗಿ ಡಿಫೆನ್ಸ್ ಆಗಿ ಹೋಗಿದ್ದ ಕಾಂಗ್ರೆಸ್ ಒಂದು ಹಂತದಲ್ಲಿ ಬಿಜೆಪಿಯ ಪ್ರಚಾರಕ್ಕೆ ಬಾಹ್ಯವಾಗಿ ಬೆಂಬಲಿಸಿದಂತೆ ಆಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ. ಇದು ತಪ್ಪಾದ ರಾಜಕೀಯ ತಂತ್ರಗಾರಿಕೆ ಎಂಬುದು ರಾಜಕೀಯ ವಿಶ್ಲೇಷಕರ ಸ್ಪಷ್ಟ ಅಭಿಪ್ರಾಯ.

ಅಲ್ಲದೆ ಬಿಜೆಪಿಯ ಆಂತರಿಕ ಸಂಘರ್ಷ ಮಂಗಳೂರು ಲೋಕಸಭೆಯಲ್ಲಿ ಸಾರ್ವಜನಿಕವಾಗಿ ವ್ಯಕ್ತವಾಗಿತ್ತು. ಬಿಜೆಪಿಯ ಅಭ್ಯರ್ಥಿ ಈ ಚುನಾವಣೆಯಲ್ಲಿ ಯಾವ ಸಂದರ್ಭದಲ್ಲಿ ಇರದ ಸವಾಲನ್ನು ಎದುರಿಸಿದ್ದರು ಇಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ ಪಡುತ್ತಾರೆ.

ನುರಿತ ಚುನಾವಣಾ ತಂತ್ರಗಾರರ(election strategist) ಕೊರತೆ ಮಂಗಳೂರು ಲೋಕಸಭೆ ಅಭ್ಯರ್ಥಿ ಹಾಗೂ ಪಕ್ಷವನ್ನು ಬಹುವಾಗಿ ಕಾಡಿದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ. ಚುನಾವಣೆಯಲ್ಲಿ ಸರಿಯಾದ ನಿರ್ದೇಶನ ಹಾಗೂ ನಿರ್ಧಾರವನ್ನು ನೀಡುವ ನುರಿತ ಅನುಭವದ ಆಧುನಿಕ ಚುನಾವಣೆಯನ್ನು ಬಲ್ಲ ತಂತ್ರಗಾರರ ಕೊರತೆ ಮಂಗಳೂರು ಕಾಂಗ್ರೆಸ್ ಅಭ್ಯರ್ಥಿಯನ್ನು ಬಹುವಾಗಿ ಕಾಡಿದೆ ಎಂದು ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಈ ನೆಲೆಯಲ್ಲಿ ಸರಿಯಾದ ತಂತ್ರಗಾರಿಕೆ ಇರುತ್ತಿದ್ದರೆ ಮಂಗಳೂರು ಲೋಕಸಭೆಯನ್ನು ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆ ಇತ್ತು ಎಂಬುದನ್ನು ರಾಜಕೀಯ ವಿಶ್ಲೇಷಕರು ಆತ್ಮವಿಶ್ವಾಸದಿಂದ ನುಡಿಯುತ್ತಾರೆ.

ಆದರೆ ಯಾವುದೇ ವಿಶ್ಲೇಷಣೆಗೆ ಸರಿಯಾದ ಉತ್ತರ ಜೂನ್ ನಾಲ್ಕರಂದು ಸಿಗಲಿದೆ ಎಂಬುದು ಅಷ್ಟೇ ಸತ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ