ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ
ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ (Congress) ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು (Police) ಬಂಧಿಸಿದ್ದಾರೆ (Arreste).
ಜನವರಿ 3 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ (Hotel) ಕಾಂಗ್ರೆಸ್ ಪಕ್ಷದ ಸಭೆ ನಡೆಸಲಾಗಿತ್ತು. ಈ ವೇಳೆ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಶಿಲ್ಪಾ ನಡುವೆ ಮಾರಾಮಾರಿ ನಡೆದಿತ್ತು. ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು. ಆ ಬಳಿಕ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸರು ಯೋಗಲಕ್ಷ್ಮಿ ಮತ್ತು ಇನ್ನೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿಂದೆಯೂ ಕೂಡಾ ಈ ಇಬ್ಬರ ನಡುವೆ ಹಲವಾರು ಬಾರಿ ಜಗಳ ನಡೆದಿತ್ತು. ಇದೀಗ ಈ ಹಿಂದಿನ ದ್ವೇಷಕ್ಕೆ ಮತ್ತೊಮ್ಮೆ ಜಗಳವಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.