ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ

Twitter
Facebook
LinkedIn
WhatsApp
ಪ್ರೊ ಎಂಆರ್ ​ದೊರೆಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಇದಕ್ಕೆ ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಕೂಡ ಮಾಡಲಾಗಿದೆ. ಇವೆಲ್ಲದರ ಮಧ್ಯೆ ಶಿಕ್ಷಣ ತಜ್ಞ ಪ್ರೊ. ಎಂ.ಆರ್​ ದೊರೆಸ್ವಾಮಿ ಅವರು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ವಿಚಾರ ಬಗ್ಗೆ ಚರ್ಚೆ ಮಾಡಲಾಗಿದೆ.

ಸಿಎಂ ಭೇಟಿ ಬಳಿಕ ಶಿಕ್ಷಣ ತಜ್ಞ ದೊರೆಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಮ್ಮ ಎರುಡೂವರೆ ವರ್ಷಗಳ ಕಾರ್ಯಕ್ರಮಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಮುಖ್ಯವಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಸರ್ಕಾರಕ್ಕೆ 18 ಸಲಹೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಇದಲ್ಲದೇ 35 ವಿಶ್ವವಿದ್ಯಾಲಯಗಳು ತಲಾ 10 ಶಾಲೆಗಳ ಅಭಿವೃದ್ಧಿಯ ಹೊಣೆ ಹೊತ್ತಿದ್ದೇವು. ನಮ್ಮ 48 ಸಾವಿರ ಸರ್ಕಾರಿ ಶಾಲೆಗಳ ಪೈಕಿ 30 ಸಾವಿರ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹೀಗಾಗಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವಂತೆ ಸಲಹೆ ನೀಡಲಾಗಿದೆ. ಇದಕ್ಕೆ ಮಧ್ಯಂತರ ವರದಿಯಲ್ಲಿ ಪರಿಹಾರವನ್ನೂ ತಿಳಿಸಲಾಗಿದೆ ಎಂದರು.

2020-21ನೇ ಸಾಲಿನ ಬಜೆಟ್​​ನಲ್ಲಿ ಪ್ರತಿಯೊಬ್ಬ ಶಾಸಕರೂ 3 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸುವ ಕಾರ್ಯಕ್ರಮವಿತ್ತು. ಅದರಂತೆ ಕೆಲ ಶಾಸಕರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಧ್ಯಂತರ ವರದಿ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ಓದಿದ ಬಳಿಕ ಮತ್ತೊಮ್ಮೆ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನಿಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ