ಗುರುವಾರ, ಮೇ 2, 2024
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಸೇರಲು 15 ದಳ ನಾಯಕರ ಅರ್ಜಿ: ಡಿ.ಕೆ.ಶಿವಕುಮಾರ್‌

Twitter
Facebook
LinkedIn
WhatsApp
ಕಾಂಗ್ರೆಸ್‌ ಸೇರಲು 15 ದಳ ನಾಯಕರ ಅರ್ಜಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು (ಡಿ.10): ‘ಕೇವಲ ಕಾಂಗ್ರೆಸ್‌ ಪಕ್ಷ ತೊರೆದು ಹೋದ ವಲಸಿಗರು ಮಾತ್ರವಲ್ಲ, ವಲಸಿಗರಲ್ಲದವರೂ ಸಹ ಪಕ್ಷಕ್ಕೆ ಬರಲು ಕಾಯುತ್ತಿದ್ದಾರೆ. ಜೆಡಿಎಸ್‌ನಿಂದ ವಿಧಾನಸಭೆ ಚುನಾವಣೆಯಲ್ಲಿ ಸೋತ ಹದಿನೈದು ಮಂದಿ ಪಕ್ಷ ಸೇರಲು ಅರ್ಜಿ ಸಲ್ಲಿಸಿದ್ದು, ಸಾಕಷ್ಟುಅಚ್ಚರಿ ಬೆಳವಣಿಗೆಗಳು ಕಾದಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎ.ಎಚ್‌.ವಿಶ್ವನಾಥ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆಯೂ ಸುಳಿವು ನೀಡಿದ್ದಾರೆ.

ವಿಶ್ವನಾಥ್‌ ಅವರು ತಮ್ಮ ಆಪ್ತರೊಂದಿಗೆ ಕಾಂಗ್ರೆಸ್‌ ಸೇರ್ಪಡೆಯಾಗುವುದಾಗಿ ಹೇಳಿಕೊಂಡಿದ್ದಾರೆ ಎಂಬ ಪ್ರಶ್ನೆಗೆ, ‘ರಾಜಕೀಯ ನಿಂತ ನೀರಲ್ಲ. ನಾನು ಈ ಕುರ್ಚಿ ಬಿಟ್ಟು ಬೇರೆ ಕಡೆಗೆ ಸರಿದರೆ ಬೇರೊಬ್ಬರು ಬಂದು ಕೂರುತ್ತಾರೆ. ನಮ್ಮ ಸಿದ್ಧಾಂತ ನಂಬಿಕೊಂಡವರು ಬರಲಿ, ನಮ್ಮ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತವಿದೆ’ ಎಂದು ಹೇಳಿದರು. ತನ್ಮೂಲಕ ಮುಕ್ತ ಆಹ್ವಾನ ನೀಡಿದರು.

ಅಚ್ಚರಿಗಳು ಕಾದಿವೆ: ವಲಸಿಗರು ಮತ್ತೆ ಪಕ್ಷಕ್ಕೆ ವಾಪಸ್ಸಾಗುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ‘ಬರೀ ವಲಸಿಗರ ಬಗ್ಗೆ ಯಾಕೆ ಯೋಚನೆ ಮಾಡುತ್ತೀರಾ? ಯು.ಬಿ.ಬಣಕಾರ್‌, ವಿ.ಎಸ್‌.ಪಾಟೀಲ್‌, ಮಧು ಬಂಗಾರಪ್ಪ, ಶರತ್‌ ಬಚ್ಚೇಗೌಡ ಇವರೆಲ್ಲ ವಲಸಿಗರಾ?’ ಎಂದು ಪ್ರಶ್ನಿಸಿದರು. ಹಿರೇಕೆರೂರಿನಲ್ಲಿ ಯು.ಬಿ.ಬಣಕಾರ್‌ ಕಡಿಮೆ ಅಂತರದಲ್ಲಿ ಸೋತಿದ್ದರು. ಇದೀಗ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಶಿವರಾಮ್‌ ಹೆಬ್ಬಾರ್‌ ವಿರುದ್ಧ ಸ್ಪರ್ಧಿಸಿದ್ದ ವಿ.ಎಸ್‌.ಪಾಟೀಲ್‌ ಪಕ್ಷಕ್ಕೆ ಬಂದಿದ್ದಾರೆ. ಇವರು ಮಾತ್ರವಲ್ಲದೆ ಜೆಡಿಎಸ್‌ನಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ 15 ಮಂದಿ ಅಭ್ಯರ್ಥಿಗಳು ಕಾಂಗ್ರೆಸ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದು ಮಾತ್ರವಲ್ಲ ಇನ್ನೂ ಸಾಕಷ್ಟುಅಚ್ಚರಿಗಳು ಕಾದಿವೆ ಎಂದು ಹೇಳಿದರು.

ಮೋದಿ ನಿತ್ಯ ಇಲ್ಲೇ ಇರಲಿ: ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ತಿಂಗಳಿಗೆ ಎರಡು ಬಾರಿ ರಾಜ್ಯಕ್ಕೆ ಬರಲಿದ್ದಾರೆ ಎಂಬ ಪ್ರಶ್ನೆಗೆ, ‘ಕೇವಲ ಎರಡು ದಿನ ಮಾತ್ರ ಯಾಕೆ? ಅವರು ದಿನ ನಿತ್ಯ ಇಲ್ಲೇ ಇದ್ದು ಪ್ರಚಾರ ಮಾಡಲಿ. ಅವರು ತಾರಾ ಪ್ರಚಾರಕರಾಗಿದ್ದು, ಇಲ್ಲೇ ವಾಸ್ತವ್ಯ ಹೂಡಲಿ. ಅವರು ಪ್ರಧಾನಮಂತ್ರಿಗಳಾಗಿರುವುದರಿಂದ ಅವರ ಸ್ಥಾನಕ್ಕೆ ನೀಡಬೇಕಾದ ಗೌರವ ನೀಡೋಣ. ಕಳೆದ ಬಾರಿ 10% ಸರ್ಕಾರ ಎಂದು ಹೇಳಿದ್ದರು, ಈಗ ಅವರ ಸರ್ಕಾರ 40% ಆಗಿದೆ. ಅವರು ಬಂದು ಏನು ಹೇಳುತ್ತಾರೋ ನೋಡೋಣ’ ಎಂದು ಹೇಳಿದರು. ಗುಬ್ಬಿ ಶ್ರೀನಿವಾಸ್‌ ಅವರಿಗೆ ಟಿಕೆಟ್‌ ನೀಡಿದರೆ ಬಂಡಾಯ ಸ್ಪರ್ಧೆ ಮಾಡುವ ಹೇಳಿಕೆ ಬಗ್ಗೆ ಕೇಳಿದಾಗ, ‘ಪಕ್ಷಕ್ಕೆ ಅನುಕೂಲ ಆಗುವ ರೀತಿ ನಾವು ಟಿಕೆಟ್‌ ನೀಡುತ್ತೇವೆ. ಯಾರು ಯಾವ ಬಂಡಾಯ ಬೇಕಾದರೂ ಏಳಲಿ. ನಾವು ಪ್ರತಿಯೊಬ್ಬರ ಅರ್ಹತೆ ಮೇಲೆ ನಿರ್ಧರಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ