ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಕಾಂತಾರ’ ನೋಡಲು ಕಾಯುತ್ತಿದ್ದೇನೆ, ಕುತೂಹಲ ಹೆಚ್ಚಾಗಿದೆ: ಕಂಗನಾ ರಣಾವತ್

Twitter
Facebook
LinkedIn
WhatsApp
‘ಕಾಂತಾರ’ ನೋಡಲು ಕಾಯುತ್ತಿದ್ದೇನೆ, ಕುತೂಹಲ ಹೆಚ್ಚಾಗಿದೆ: ಕಂಗನಾ ರಣಾವತ್

ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಕಾಂತಾರ (Kantara) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ಇನ್ನೂ ಕೆಲವರು ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ‘ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ನಾನೂ ಕಾಯುತ್ತಿದ್ದೇನೆ. ಶೀಘ್ರದಲ್ಲೇ ಸಿನಿಮಾ ನೋಡುವೆ’ ಎಂದು ಹೇಳಿದ್ದಾರೆ.

ಬಾಲಿವುಡ್ ಸಿನಿಮಾಗಳನ್ನು ತೆಗಳುತ್ತಲೇ ಬಂದಿರುವ ಕಂಗನಾ, ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಸಿನಿಮಾಗಳನ್ನು ಹೊಗಳುತ್ತಿದ್ದಾರೆ. ಅಲ್ಲದೇ, ದಕ್ಷಿಣ ಭಾರತದ ಹೀರೋಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಬಾಲಿವುಡ್ ನಟರನ್ನು ಸದಾ ಕಾಲೆಳೆಯುವ ಕಂಗನಾ, ಈ ಹಿಂದೆ ಯಶ್ ಅವರನ್ನು ಹೊಗಳಿದ್ದರು. ಇದೀಗ ಕಾಂತಾರ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶೀಘ್ರದಲ್ಲೇ ಸಿನಿಮಾ ನೋಡುವುದಾಗಿಯೂ ತಿಳಿಸಿದ್ದಾರೆ. 

ಬಾಕ್ಸ್ ಆಫೀಸ್ (Box Office) ವಿಚಾರದಲ್ಲೂ ಸಿನಿಮಾ ಹಿಂದೆ ಉಳಿದಿಲ್ಲ. ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishabh Shetty) ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist