`ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) `ಕಾಂತಾರ’ (Kantara) ಸಿನಿಮಾ ಬಗ್ಗೆ ಮತ್ತು ಕನ್ನಡ ಚಿತ್ರರಂಗದಿಂದ ನಟಿಯನ್ನ ಬ್ಯಾನ್ ಮಾಡಿದ್ದಾರೆ ಎಂಬ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ರಶ್ಮಿಕಾ ಮಂದಣ್ಣ ಈಗ ಸ್ಪಷ್ಟನೆ ನೀಡಿದ್ದಾರೆ.
ರಶ್ಮಿಕಾನ ಬ್ಯಾನ್ (Ban) ಮಾಡಬೇಕು ಎನ್ನುತ್ತಿರುವುದು ಸೋಶಿಯಲ್ ಮೀಡಿಯಾ ಚರ್ಚೆ ಅಷ್ಟೆ. ಚಿತ್ರರಂಗದಿಂದ ಯಾರು ಈ ಮಾತನ್ನು ಹೇಳಿಲ್ಲ. ಕನ್ನಡ ಚಿತ್ರರಂಗದಿಂದ ನನ್ನನ್ನು ಬ್ಯಾನ್ ಮಾಡಿದ್ದಾರೆ ಎಂದು ಹೇಳುತ್ತಿರುವ ಸುದ್ದಿಯಲ್ಲಿ ವಾಸ್ತವ ಇಲ್ಲ. ಈವರೆಗೆ ಇಂತಹ ವಿಚಾರ ನನ್ನ ಬಳಿಗೆ ಬಂದಿಲ್ಲ ಎಂದಿದ್ದಾರೆ. ಕನ್ನಡ ಸಿನಿಮಾಗಳ ಮೇಲೆ ಯಾವಾಗಲೂ ನನಗೆ ಪ್ರೀತಿ ಇದ್ದೇ ಇದೆ. ವಾಸ್ತವ ತಿಳಿದುಕೊಳ್ಳದೇ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.
`ಕಾಂತಾರ’ ಬಿಡುಗಡೆಯಾದ ಎರಡು ದಿನಕ್ಕೆ ಸಿನಿಮಾ ನೋಡಿದ್ರಾ? ಎಂದು ಕೇಳಿದ್ದರು. ನೋಡಿರಲಿಲ್ಲ. ಅದಕ್ಕೆ ಸರಿಯಾಗಿ ಸ್ಪಂದಿಸಿರಲಿಲ್ಲ. ಆ ನಂತರ ಸಿನಿಮಾ ನೋಡಿ ಚಿತ್ರತಂಡಕ್ಕೆ ಮೆಸೇಜ್ ಮಾಡಿದ್ದೆ. ಅವರು ಥ್ಯಾಂಕ್ಯೂ ಎಂದು ರಿಪ್ಲೇ ಮಾಡಿದ್ದರು ಎಂದು ಈ ವೇಳೆ ರಶ್ಮಿಕಾ ಮಾತನಾಡಿದ್ದಾರೆ.
ನನ್ನ ವೈಯಕ್ತಿಕ ವಿಚಾರಗಳನ್ನು ಕ್ಯಾಮೆರಾ ಮುಂದೆ ಇಟ್ಟು ಪ್ರಪಂಚಕ್ಕೆ ತೋರಿಸಲು ಸಾಧ್ಯವಿಲ್ಲ. ಅಷ್ಟಕ್ಕೂ ನನ್ನ ವೈಯಕ್ತಿಕ ವಿಚಾರಗಳು ಪ್ರಪಂಚಕ್ಕೆ ಬೇಕಾಗಿಲ್ಲ. ವೃತ್ತಿಪರವಾಗಿ ನನ್ನ ಸಿನಿಮಾಗಳ ಬಗ್ಗೆ ಮಾತನಾಡುವುದು ನನ್ನ ಜವಾಬ್ದಾರಿ. ನನ್ನ ಬಗ್ಗೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅದನ್ನೆಲ್ಲಾ ಅವರ ವಿವೇಚನೆಗೆ ಬಿಡುತ್ತೇನೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist