ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಪು: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ -ಯುವತಿ ಮೃತ್ಯು

Twitter
Facebook
LinkedIn
WhatsApp
ಕಾಪು: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ -ಯುವತಿ ಮೃತ್ಯು1c337646f29875672b5a61192b9010f9 1

ಕಾಪು, ಫೆ 14 : ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.

ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು ಸ್ಕೂಟರ್‌ ನನ್ನ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ