![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಕರಾವಳಿಯ ಪ್ರಮುಖ ವಿಧಾನಸಭಾ ಕ್ಷೇತ್ರ ಕಾಪುವಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳಲ್ಲೂ ಅಭ್ಯರ್ಥಿಗಳು ಬದಲಾಗಬಹುದು ಎಂಬ ಸಂದೇಶ ಹರಿದಾಡುತ್ತಿದೆ.
ಬಿಜೆಪಿಯಲ್ಲಿ ಈಗ ಹಾಲಿ ಶಾಸಕ ಲಾಲಾಜಿ ಮೆಂಡನ್ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆಂತರಿಕ ಮೂಲದ ಪ್ರಕಾರ ಇನ್ನೆರಡು ಅಭ್ಯರ್ಥಿಗಳು ಈ ಕ್ಷೇತ್ರಕ್ಕೆ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ವಿಶ್ಲೇಷಣೆಯ ಪ್ರಕಾರ ಯಶ್ಪಲ್ ಸುವರ್ಣ ಸಹ ಅಭ್ಯರ್ಥಿ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಬಿಜೆಪಿ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕಾಗಿದೆ.
ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್ನಲ್ಲಿ ಕಳೆದ ಬಾರಿ ಸ್ಪರ್ಧಿಸಿ ಸೋತಿದ್ದ ವಿನಯ್ ಕುಮಾರ್ ಸೊರಕೆ ಈ ಬಾರಿಯೂ ಅಭ್ಯರ್ಥಿಯಾಗುವ ಉಮೇದಿನಲ್ಲಿದ್ದಾರೆ. ಆದರೆ ಬಿಲ್ಲವ ನಾಯಕರಾದ ರಾಜಶೇಖರ ಕೋಟ್ಯಾನ್ ಸಹ ಕಾಪು ಕ್ಷೇತ್ರದ ಆಕಾಂಕ್ಷಿ ಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಎರಡನೇ ಹಂತದ 2 ನಾಯಕರುಗಳು ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಪು ಕ್ಷೇತ್ರ ಸತತವಾಗಿ ಕಾಂಗ್ರೆಸ್ ಹಾಗೂ ನಂತರ ಬಿಜೆಪಿಗೆ ಒಲಿದ ಕ್ಷೇತ್ರ. ವಸಂತ ಸಾಲಿಯಾನ ಸತತವಾಗಿ ಕಾಪು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅನಂತರ ವಿನಯ್ ಕುಮಾರ್ ಸೊರಕೆ, ನಂತರ ಲಾಲಾಜಿ ಮೆಂಡನ್ ಪ್ರತಿನಿಧಿಸಿದ್ದರು. ಈ ಬಾರಿ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಎರಡು ಪಕ್ಷಗಳಲ್ಲೂ ಇದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist