ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಬೂಲ್ ಗುಂಡಿನ ದಾಳಿಗೆ ಮೂವರು ಗನ್‍ಮ್ಯಾನ್‍ಗಳು ಬಲಿ – ಹೊಣೆಹೊತ್ತ ISIS

Twitter
Facebook
LinkedIn
WhatsApp
ಕಾಬೂಲ್ ಗುಂಡಿನ ದಾಳಿಗೆ ಮೂವರು ಗನ್‍ಮ್ಯಾನ್‍ಗಳು ಬಲಿ – ಹೊಣೆಹೊತ್ತ ISIS

ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‍ನಲ್ಲಿ (Kabul) ಚೀನೀಯರ ವಸತಿ ಗೃಹದ ಮೇಲೆ ದಾಳಿ ನಡೆಸಿ ಮೂವರು ಗನ್‍ಮ್ಯಾನ್‍ಗಳನ್ನು ದಾಳಿಕೋರರು ಬಲಿ ಪಡೆದಿದ್ದಾರೆ. ಈ ಘಟನೆಯ ಬಳಿಕ ದಾಳಿಯ ಹೊಣೆಯನ್ನು ಐಸಿಸ್‌ (ISIS) ಹೊತ್ತುಕೊಂಡಿದೆ.

ಕಾಬೂಲ್‍ನ ಶಹರ್-ಇ ನಾವ್ ಪ್ರದೇಶದಲ್ಲಿ ಚೀನಾದ ಅತಿಥಿ ಗೃಹದ ಬಳಿ ಭಾರೀ ಸ್ಫೋಟ ಹಾಗೂ ಗುಂಡಿನ ದಾಳಿ ನಿನ್ನೆ ನಡೆದಿತ್ತು. ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಚೀನಾದ ವ್ಯಾಪಾರಸ್ಥರು ಕಾಬೂಲ್‍ನ ಜನಪ್ರಿಯ ಲಾಂಹನ್ ಹೋಟೆಲ್‍ಗೆ ತೆರಳುತ್ತಾರೆ. ಹಾಗಾಗಿ ಹೋಟೆಲ್‍ಗೆ ದಾಳಿಕೋರರು ನುಗ್ಗಿ ಗುಂಡಿನ ಮಳೆ ಸುರಿಸಿದ್ದರು. ಶಸ್ತ್ರಾಸ್ತ್ರಗಳನ್ನು ಬ್ಯಾಗ್‍ನಲ್ಲಿ ತುಂಬಿ ಹೋಟೆಲ್ ಪ್ರವೇಶಿಸಿದ ದಾಳಿಕೋರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿ ಮೂವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ. 

ದಾಳಿ ನಡೆಯುತ್ತಿದ್ದಂತೆ ಹೋಟೆಲ್‍ನ ಬಾಲ್ಕನಿಯಿಂದ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಇಬ್ಬರು ವಿದೇಶಿಗರು ಗಾಯಗೊಂಡಿದ್ದಾರೆ. ಶಾಹರ್-ಎ-ನಾವ್ ಪ್ರದೇಶದಲ್ಲಿ ದಾಳಿಗೊಳಗಾದ ಹೋಟೆಲ್ ಬಳಿ ಇರುವ ಸ್ಥಳೀಯ ಆಸ್ಪತ್ರೆಗೆ 20ಕ್ಕೂ ಹೆಚ್ಚು ಮಂದಿ ಗಾಯಳುಗಳನ್ನು ದಾಖಲಿಸಲಾಗಿದ್ದು, 3 ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. 

ಚೀನಾದ ರಾಯಭಾರಿಯು ಅಫ್ಘಾನಿಸ್ತಾನದ ಉಪ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಭದ್ರತೆ ಸಂಬಂಧಿತ ವಿಷಯಗಳ ಬಗ್ಗೆ ಒಂದು ದಿನದ ಹಿಂದೆ ಚರ್ಚಿಸಿದ್ದರು. ಅಲ್ಲದೇ ಅಘ್ಘಾನಿಸ್ತಾನದಲ್ಲಿರುವ ಚೀನಾದ ರಾಯಭಾರ ಕಚೇರಿಯ ರಕ್ಷಣೆಯ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕಾಗಿ ಮನವಿ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ದಾಳಿ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ