ಗುರುವಾರ, ಮೇ 16, 2024
Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರವಾರ: ದೇಶ ರಕ್ಷಣೆ ಹೆಸರಲ್ಲಿ ಮೀನುಗಾರರಿಗೆ ಕಿರುಕುಳ

Twitter
Facebook
LinkedIn
WhatsApp
boat

ಕಾರವಾರ(ಫೆ.04):  ನೌಕಾನೆಲೆ ಬರುವುದಕ್ಕೆ ಮುನ್ನ ಮೀನುಗಾರರು ಕಡಲತೀರದ ರಕ್ಷಣೆ ಮಾಡುತ್ತಿದ್ದರು. ಆದರೆ ಇದೇ ಮೀನುಗಾರರಿಗೆ ದೇಶದ ರಕ್ಷಣೆ ಹೆಸರಲ್ಲಿ ನೌಕಾನೆಲೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಆರೋಪಿಸಿದ್ದಾರೆ. ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮೀನುಗಾರಿಕೆಗೆಂದು ಆಳಸಮುದ್ರದವರೆಗೂ ಮೀನುಗಾರರು ತೆರಳುತ್ತಾರೆ. ಹವಾಮಾನ ವೈಪರೀತ್ಯ ಸಂದರ್ಭಗಳಲ್ಲಿ ಸುರಕ್ಷಿತ ಪ್ರದೇಶಗಳಲ್ಲಿ ರಕ್ಷಣೆ ಪಡೆದುಕೊಳ್ಳುತ್ತಾರೆ. ಆದರೆ ನೌಕಾನೆಲೆ ಅಧಿಕಾರಿಗಳು ಬಾಯಲ್ಲಿ ಮಾತನಾಡುತ್ತಿಲ್ಲ. ಗನ್‌ಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ ಭದ್ರತೆ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿರುವ ನೌಕಾನೆಲೆ ಸ್ಥಳೀಯ ಮೀನುಗಾರರಿಗೆ ರಕ್ಷಣೆ ನೀಡುತ್ತಿಲ್ಲ. ನೌಕಾನೆಲೆಯಲ್ಲಿ ಸ್ಥಳೀಯವಾಗಿ ಸಂಪರ್ಕಿಸಲು ಕನ್ನಡ ಭಾಷೆ ಬಲ್ಲ ಅಧಿಕಾರಿಗಳಿಲ್ಲ. ಸಮಸ್ಯೆ ಎದುರಾದಾಗ, ನೇಮಕಾತಿ, ಇತರೆ ಮಾಹಿತಿ ಪಡೆಯಲು ಕನ್ನಡದ ಅಧಿಕಾರಿಗಳು ನೌಕಾನೆಲೆಯಲ್ಲಿ ನೇಮಕವಾಗಬೇಕು. ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕು ಎಂದರು.

ಹಿಂದಿ, ಇಂಗ್ಲಿಷ್‌ ಅಧಿಕಾರಿಗಳನ್ನು ಮಾತನಾಡಿಸಲು ಯಾರೂ ಮಧ್ಯಸ್ಥಿಕೆ ವಹಿಸುತ್ತಿಲ್ಲ. ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಮೀನುಗಾರರು ನೌಕಾನೆಲೆ ನಡುವಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಮೀನುಗಾರರು ನೌಕಾನೆಲೆಗೆ ಭೂಮಿ ತ್ಯಾಗ ಮಾಡಿ ನಿರಾಶ್ರಿತರಾದವರು. ಅವರಿಗೆ ಕಿರುಕುಳ ನೀಡುತ್ತಿರುವುದು ಸರಿಯಲ್ಲ, ಕರ್ನಾಟಕ ರಕ್ಷಣಾ ವೇದಿಕೆ ಮೀನುಗಾರರ ಬೆಂಬಲಕ್ಕೆ ಇದೆ. ಮೀನುಗಾರರಿಗೆ ಕಿರುಕುಳ ಹೆಚ್ಚಾಗಿದೆ. ತೊಂದರೆಯಾದಾಗ ಹೇಳಿಕೊಂಡರೂ ಅದನ್ನು ಮೇಲಧಿಕಾರಿಗಳ ಗಮನಕ್ಕೆ ತರುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿಲ್ಲ ಎಂದು ಅವರು ವಿಷಾದಿಸಿದರು.

ನೌಕಾನೆಲೆ ಅಧಿಕಾರಿಗಳು ಮಾಧ್ಯಮಗಳ ಎದುರು ಮೀನುಗಾರರಿಗೆ ಯಾವುದೇ ಕಿರುಕುಳ ನೀಡುವುದಿಲ್ಲ ಎಂದು ಹೇಳಿಕೆ ನೀಡುತ್ತಾರೆ. ಆದರೆ ಸಾಕಷ್ಟುಬಾರಿ ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ನೌಕಾನೆಲೆ ವ್ಯಾಪ್ತಿಯಲ್ಲಿ ಹೋದರೂ ಮೀನುಗಾರರ ಮೇಲೆ ಹಲ್ಲೆ ಮಾಡಿ ತೊಂದರೆ ನೀಡಿರುವ ಘಟನೆ ನಡೆದಿದೆ. ಹೀಗೆ ಮಾಡುವುದು ಸರಿಯಲ್ಲ. ಈ ಬಗ್ಗೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮೀನುಗಾರರು ಹಾಗೂ ನೌಕಾನೆಲೆಯೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ