ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನಲ್ಲಿ ಫಾಲೋ ಮಾಡ್ತಾರೆ, ಟ್ರಕ್ ಹತ್ತಿಸಲು ಬರ್ತಾರೆ- ಶಾಸಕಿ ರೂಪಾಲಿ ನಾಯ್ಕ್‌ಗೆ ಜೀವ ಬೆದರಿಕೆ

Twitter
Facebook
LinkedIn
WhatsApp
Yogi CM 1

ಕಾರವಾರ: ಚುನಾವಣೆ (Election) ಸಮೀಪಿಸುತಿದ್ದಂತೆ ಆರೋಪ ಪ್ರತ್ಯಾರೋಪಗಳು ಸಾಮಾನ್ಯ. ಆದರೆ ಕಾರವಾರದಲ್ಲಿ ಬಿಜೆಪಿ ಮಹಿಳಾ ಶಾಸಕಿ ರೂಪಾಲಿ ನಾಯ್ಕ್(Rupali Naik), ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಹೇಳಿಕೆ ನೀಡುವ ಮೂಲಕ ಮತ್ತೆ ವಿರೋಧಿಗಳ ಎದುರು ಹೊಸ ಬಾಂಬ್ ಸಿಡಿಸಿದ್ದಾರೆ.

ಹೌದು. ಕಾರವಾರದಲ್ಲಿ ಈ ಹಿಂದೆ ಮಾಜಿ ಶಾಸಕ ಸತೀಶ್ ಸೈಲ್((Sathish Sail) , ಹಾಲಿ ಶಾಸಕಿ ರೂಪಾಲಿ ನಾಯ್ಕ್ ಕಿತ್ತಾಟ ಠಾಣೆ ಮೆಟ್ಟಿಲೇರಿ ದೂರು ಪ್ರತಿದೂರುಗಳು ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾರವಾರ ಶಾಸಕಿ ತಮಗೆ ಜೀವ ಬೆದರಿಕೆ ಇದೆ ಎಂದು ಹೇಳಿಕೆ ನೀಡಿದ್ದು ರಾಜಕೀಯ ಬಣ್ಣ ರಂಗೇರಿದೆ.

ತಮ್ಮ ಮನೆಯ ಮುಂದಿರುವ ಬೀದಿ ದೀಪ ತೆಗೆದು ಹೆದರಿಸುತ್ತಾರೆ. ಟ್ರಕ್ ಮೂಲಕ ನನ್ನ ವಾಹನಕ್ಕೆ ಡಿಕ್ಕಿಯಾಗಿಸಲು ಬರುತ್ತಾರೆ. ಕಾರಿನಲ್ಲಿ ಫಾಲೋ ಮಾಡುತ್ತಾರೆ. ನನ್ನ ಮತ್ತು ನನ್ನ ಅಕ್ಕನ ಮಗನ ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ರು. ಈ ಹಿಂದೆಯೂ ಮಾಡಿದ್ರು, ಈಗಲೂ ಮಾಡ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. 

ಜೊತೆಗೆ ಜೀವ ಬೆದರಿಕೆ (Threat For Rupali Naik) ಹಾಕುತ್ತಿರುವವರು ಯಾರು ಏನು ಗೊತ್ತಾಗುತ್ತಿಲ್ಲ. ನನಗೆ ಅನೇಕ ಮಂದಿ ವಿರೋಧಿಗಳು ಇದ್ದಾರೆ. ತಮಗೆ ಅಧಿಕಾರ ಸಿಕ್ಕಿಲ್ಲ ಎಂದು ಹತಾಶರಾದವರೂ ಇದ್ದಾರೆ. ಮಹಿಳೆಯ ಮುಂದೆ ಬರುವುದನ್ನು ನೋಡಕ್ಕಾಗದೆ, ಅಭಿವೃದ್ಧಿ ಸಹಿಸದೇ ಇರುವವರು ಇದ್ದಾರೆ. ಈ ಬಗ್ಗೆ ಹಿಂದಿನ ಎಸ್.ಪಿ ಯವರಿಗೂ ತಿಳಿಸಿದ್ದೆ. ಈಗಿನ ಎಸ್.ಪಿಯವರಿಗೂ ತಿಳಿಸಿದ್ದೇನೆ. ಭದ್ರತೆ ನೀಡಿದ್ದಾರೆ. ಈಗಲೂ ಮತ್ತೆ ದೂರು ಕೊಡುತ್ತಿದ್ದೇನೆ. ನನಗೆ ಬೆದರಿಕೆ ನೀಡಿದ್ರೆ ಹೆದರಿಕೊಂಡು ದೂರ ಸರೀತಾರೆ ಎಂದು ಅಂದುಕೊಂಡಿದ್ದಾರೆ. ನಾನು ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿಯುವುದೂ ಇಲ್ಲ, ನಾನು ಏನು ಕೆಲಸ ಮಾಡಬೇಕೋ ಆ ಕೆಲಸ ಮಾಡಿ ಸಾಯುತ್ತೇನೆ ಎಂದು ರೂಪಾಲಿ ನಾಯ್ಕ್ ಹೇಳಿದ್ದಾರೆ.

ಶಾಸಕಿ ರೂಪಾಲಿ ನಾಯ್ಕ್ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದು, ಇದೀಗ ರಾಜಕೀಯ ಚರ್ಚೆಗೂ ಕಾರಣವಾಗಿದೆ. ಶಾಸಕರಿಗೆ ಯಾರು ಹೆದರಿಸಿದ್ದಾರೋ ಗೊತ್ತಿಲ್ಲ, ಆದರೆ ಈ ಬೆಳವಣಿಗೆ ಸರಿಯಲ್ಲ. ಇಬ್ಬರೂ ಸ್ಟೇಟ್ಮೆಂಟ್ ಕೊಡೋದನ್ನ ಕಡಿಮೆ ಮಾಡಬೇಕು, ಯಾರೂ ಏನೇ ಹೇಳಲಿ ಮುಂಬರುವ ಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ ಎಂದು ಅವರದ್ದೇ ಪಕ್ಷದ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಾಲಿ-ಮಾಜಿಗಳಿಗೆ ಟಾಂಗ್ ನೀಡಿದ್ದಾರೆ.

ಶಾಸಕಿ ರೂಪಾಲಿ ನಾಯ್ಕ್ ಬೆದರಿಕೆ ಕುರಿತು ಹೇಳಿಕೆ ನೀಡುತ್ತಿದ್ದಂತೆ ಪೊಲೀಸ್ ಇಲಾಖೆಯಿಂದಲೂ ಭದ್ರತೆ ಹೆಚ್ಚಿಸಲಾಗಿದೆ. ಇವುಗಳ ನಡುವೆ ಕಾರವಾರದಲ್ಲಿ ಮಾಜಿ-ಹಾಲಿಗಳ ಜಗಳ ಅತಿರೇಕಕ್ಕೆ ಹೋಗುತ್ತಿದ್ದು ಚುನಾವಣೆ ಸಂದರ್ಭದಲ್ಲಿ ಯಾವ ಹಂತಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ