ಕಾರು ಗ್ಯಾರೇಜ್‍ನಲ್ಲಿ ನೋಡನೋಡ್ತಿದ್ದಂತೆ 3ಕ್ಕೂ ಹೆಚ್ಚು ವಾಹನಗಳು ಧಗಧಗ
Twitter
Facebook
LinkedIn
WhatsApp
ಬೆಂಗಳೂರು: ಸಿಲಿಕಾನ್ ಸಿಟಿಯ ಮತ್ತಿಕೆರೆಯಲ್ಲಿರುವ ಕಾರು ಗ್ಯಾರೇಜ್ (Mattikere Car Ggarage) ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮತ್ತಿಕೆರೆ ಸಮೀಪದ ದಿವಾನರಪಾಳ್ಯದ 7 ನೇಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಗುರುವಾರ ರಾತ್ರಿ 10.15ರ ವೇಳೆ ಗ್ಯಾರೇಜ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವಾಹನಗಳು ಹೊತ್ತಿ ಉರಿದಿವೆ.
ಗ್ಯಾರೇಜ್‍ಗೆ ಬಂದಿದ್ದ ಒಂದು ಕಾರ್, ಎರಡು ಟಾಟಾ ಏಸ್ ವಾಹನಗಳು ಅಗ್ನಿಗೆ ಆಹುತಿಯಾಗಿದ್ದು, ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.