ಕಾರು – ಟಿಟಿ ವಾಹನದ ನಡುವೆ ಭೀಕರ ಅಪಘಾತ: ಮಗು ಸೇರಿ ಇಬ್ಬರ ದಾರುಣ ಸಾವು
Twitter
Facebook
LinkedIn
WhatsApp
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ ನಡೆದಿದೆ.
ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ.
ಭೀಕರ ಅಪಘಾತವು ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಹೊನ್ನಾವರದಿಂದ ಸಂಬಂಧಿಕರ ಮದುವೆಗೆ ಗಿರಿಧರ್ ಕುಟುಂಬ ತೆರಳುತ್ತಿದ್ದರು, ಕೇರಳದಿಂದ ಚಿಕ್ಕಮಗಳೂರಿಗೆ ಟಿ ಟಿ ವಾಹನ ಪ್ರವಾಸಕ್ಕೆ ಬರುತ್ತಿತ್ತು. ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.