ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರು ಬೈಕ್ ಮುಖಾಮುಖಿ ಡಿಕ್ಕಿ - ಸವಾರ ಸಹಿತ ಮಗು ಗಂಭೀರ

Twitter
Facebook
LinkedIn
WhatsApp

ಕಾರ್ಕಳ, ಡಿ 30: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಎರಡು ವರ್ಷದ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಗಾಯಗೊಂಡ ಬೈಕ್ ಸವಾರ ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಕೂಡ ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ.

ಬೈಕ್ ಸವಾರ ನಿತ್ಯಾನಂದ ತನ್ನ ಸಹೋದರಿಯ ಮಗುವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಕಾರ್ಕಳದಿಂದ ಅಂಡಾರು ಕಡೆಗೆ ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಮಾರುತಿ ಬಲೆನೊ ಕಾರು ಚಾಲಕ ಎದುರಿನಲ್ಲಿ ಹೋಗುತ್ತಿದ್ದ ವಾಹನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಬಲಗಡೆ ತಿರುಗಿಸಿದಾಗ ಘಟನೆಗೆ ಕಾರಣವೆನ್ನಲಾಗಿದೆ.

ಪರಿಣಾಮವಾಗಿ ನಿತ್ಯಾನಂದ ಕುಲಾಲ್ ಸವಾರಿ ಮಾಡಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಇಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ನುಜ್ಜುಗುಜ್ಜಾಗಿದೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ