ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ, 5 ಜನ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp

ಪ್ರಯಾಗ್‌ರಾಜ್‌: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿ ಒಟ್ಟು ಐದು ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ದ ಪ್ಲಾಜಾನಲ್ಲಿರುವ ಹ್ಯಾಂಡಿಯಾ ಟೋಲ್ ಬಳಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ತಮ್ಮ ತವೇರಾ ಕಾರಿನಲ್ಲಿ ವಿಂಧ್ಯಾಚಲ ದೇವಸ್ಥಾನಕ್ಕೆ ಹೋಗುತ್ತಿದ್ದರು.

ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಹಂಡಿಯಾ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (SDM), ಸರ್ಕಲ್ ಆಫೀಸರ್ (CO) ಮತ್ತು ಸ್ಟೇಷನ್ ಹೌಸ್ ಆಫೀಸರ್ (SHO) ಅವರು ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಎಸ್‌ಡಿಎಂ ಹ್ಯಾಂಡಿಯಾ ಅವರ ಪ್ರಕಾರ, ಬೆಳಿಗ್ಗೆ 6.40 ರ ಹೊತ್ತಿಗೆ, ವಾರಣಾಸಿ ಹೆದ್ದಾರಿಯ ಹ್ಯಾಂಡಿಯಾ ಟೋಲ್ ಪ್ಲಾಜಾ ಬಳಿ ಹತ್ತು ಜನರಿದ್ದ ಟವೇರಾ ಕಾರು ಅಪಘಾತಕ್ಕೀಡಾಯಿತು. ಇವರು ಶಿವಗಢ ಪೊಲೀಸ್ ಠಾಣೆ ವ್ಯಾಪ್ತಿಯ ಸರೈ ಲಾಲ್ ಗ್ರಾಮದಿಂದ ವಿಂಧ್ಯಾಚಲಕ್ಕೆ ಹೋಗುತ್ತಿದ್ದರು. ಕಾರು ಚಾಲಕನಿಗೆ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಮೃತರಲ್ಲಿ 4 ಮಹಿಳೆಯರು ಮತ್ತು ಒಂದು ವರ್ಷದ ಮಗು ಎಂದು ಹೇಳಲಾಗಿದೆ.ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯವನ್ನು ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ