ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಯಕರ್ತನಿಗೆ ಡಿ.ಕೆ ಶಿವಕುಮಾರ್ ಕಪಾಳಮೋಕ್ಷ ಬಗ್ಗೆ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು..?

Twitter
Facebook
LinkedIn
WhatsApp
ಕಾರ್ಯಕರ್ತನಿಗೆ ಡಿ.ಕೆ ಶಿವಕುಮಾರ್ ಕಪಾಳಮೋಕ್ಷ  ಬಗ್ಗೆ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು..?

ಮಂಗಳೂರು: ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು. ನಾವು ಯಾರ ಬಗ್ಗೆಯೂ ಮಾತನಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾರ್ಯಕರ್ತನಿಗೆ ಡಿ.ಕೆ ಶಿವಕುಮಾರ್ ಕಪಾಳಮೋಕ್ಷ ಮಾಡಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಏನೇ ಮಾತಾಡಿದ್ರೂ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ಮತ್ತು ಜನರು ನಮ್ಮತ್ರ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನ ಪಡುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ ಎಂದು ತಿಳಿಸಿದರು.

ಯಾರೇ ರಾಜಕಾರಣಿ ಆದ್ರೂ ಎಲ್ಲೆಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ. ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತೆ. ಕಾಂಗ್ರೆಸ್ಸಿಗರು ಹಲ್ಲೆ ಮಾಡ್ತಾ ಇರೋದು ಇದು ಮೊದಲಲ್ಲ. ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಯುದ್ದಕ್ಕೆ ಕರೆದು ಒಳಹೊಕ್ಕಿದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ
ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು