ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

Twitter
Facebook
LinkedIn
WhatsApp
ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಆನೇಕಲ್: ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತ ವಿದ್ಯಾರ್ಥಿನಿ, ಸಂಗೀತಾ ಪ್ರಥಮ ಪಿಯು ತಂಡದಲ್ಲಿ ಆಕೆ ಆಡುತ್ತಿದ್ದಳು. ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ಸಂಗೀತಾ ವಾಸವಿದ್ದಳು. ಕಬಡ್ಡಿ ಆಡುತ್ತಿರುವಾಗಲೇ ಕುಸಿದುಬಿದ್ದ ಸಂಗೀತಾಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಂಗೀತಾ ಮೃತಪಟ್ಟಿದ್ದರು.

ಅತ್ತಿಬೆಲೆಯ ಸೆಂಟ್ ಫಿಲೋಮಿನಾ ಶಾಲೆ (St. Philomena School Attibele) ಯಲ್ಲಿ ಘಟನೆ ನಡೆದಿದೆ. ತಕ್ಷಣ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಂಗೀತಾ ಸಾವನ್ನಪ್ಪಿದ್ದಾಳೆ. ಸಂಗೀತಾ ಧಾರವಾಡ (Dharwad) ಮೂಲದವಳಾಗಿದ್ದು ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಕ್ರೀಡಾ ಉತ್ಸವದಲ್ಲಿ ಮಹಿಳೆಯರ ತಂಡದ ಕಬಡ್ಡಿ ಕೂಡ ಇತ್ತು, ಸಂಗೀತಾ ತನ್ನ ತಂಡದ ಪರವಾಗಿ ರೈಡಿಂಗ್ ಹೋಗಿದ್ದಳು. ಆಗ ಎದುರಾಳಿ ತಂಡದವರು ಆಕೆಯನ್ನು ಹಿಡಿಯಲು ಮುಂದಾಗಿದ್ದರು. ಆಗ ಒಮ್ಮೆಗೆ ಹೃದಯಾಘಾತಗೊಂಡು ಸಂಗೀತಾ ಕುಸಿದುಬಿದ್ದಿದ್ದಳು. ಕೂಡಲೇ ಆಕೆಯನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಅತ್ತಿಬೆಲೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಂಗೀತಾ ಮೃತದೇಹ ಸ್ಥಳಾಂತರಿಸಲಾಗಿದೆ. ವಿದ್ಯಾರ್ಥಿನಿ ಸಂಗೀತಾ ಸಾವು ಹಿನ್ನೆಲೆ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುವ ಯುವಕರ ಸಂಖ್ಯೆ ಹೆಚ್ಚಾಗಿದೆ. 20-45ರವೊಳಗಿನ ಪುರುಷರು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಹೆಚ್ಚಿನ ಯುವಕರು ಹೃದಯ ತಪಾಸಣೆ ಒಳಗಾದರಾದರೂ, ಸಾವಿನ ಪ್ರಮಾಣ ತಗ್ಗಿಲ್ಲ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ