ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
Twitter
Facebook
LinkedIn
WhatsApp
ಮೈಸೂರು: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.
ಜಿಲ್ಲೆಯ ಟಿ. ನರಸೀಪುರ (Tirumakudalu Narasipura) ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು, ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು.
ಈ ವೇಳೆ ನದಿಯಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.