ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾವೇರಿ ನಾಲೆಗೆ ಈಜಲು ಹೋಗಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರ ಸಾವು

Twitter
Facebook
LinkedIn
WhatsApp
aa Cover 4jr4g0gi5hpo4p9itrb5s7eu07 20171017020615.Medi 1

ಮಂಡ್ಯ: ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ (VC Channel) ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ. ಮೃತ ದುರ್ದೈವಿಗಳು ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾಗಿದ್ದು, ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಎಂದು ಗುರುತಿಸಲಾಗಿದೆ. ಇವರು ರಂಜಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಮೂರು ಮೃತದೇಹಗಳನ್ನು ವಿಸಿ ನಾಲೆಯಿಂದ ಹೊರ ತೆಗೆಯಲಾಗಿದೆ. ಉಳಿದ ಎರಡು ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಯಚೂರಿನಲ್ಲಿಯೂ ಇಂಥದ್ದೇ ಘಟನೆ ಸಂಭವಿಸಿದ್ದು, ಜಿಲ್ಲೆಯ ಸಿರವಾರ ತಾಲ್ಲೂಕಿನ ಮಾಚನೂರು ಗ್ರಾಮದಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬರ ಮೃತಪಟ್ಟಿದ್ದಾನೆ. ಮೃತನನ್ನು ನವಾಜ್(13) ಎಂದು ಗುರುತಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ