ಕಾಸರಗೋಡು: ಬ್ಯಾಂಕ್ ಮ್ಯಾನೇಜರ್, ಪತಿ, ಇಬ್ಬರು ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು, ಜು 8 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕಾಸರಗೋಡು ಶಾಖೆಯ ಮ್ಯಾನೇಜರ್, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತರನ್ನು ಮ್ಯಾನೇಜರ್ ಶೀನಾ (35), ಅವರ ಪತಿ ಸಬೀಶ್ (37), ಮಕ್ಕಳಾದ ಹರಿಗೋವಿಂದ್ (6), ಮತ್ತು ಶ್ರೀವರ್ಧನ್ (2.5) ಎಂದು ಗುರುತಿಸಲಾಗಿದೆ. ಶೀನಾ ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು
ಸಬೀಶ್ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಬೀಶ್ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಶೀನಾ ಕೆಲವು ದಿನಗಳ ಹಿಂದೆಯಷ್ಟೇ ಎಸ್‌ಬಿಐಯ ಕಾಸರಗೋಡು ಶಾಖೆಗೆ ವರ್ಗಾವಣೆಗೊಂಡಿದ್ದರು.
ಸುಳ್ಯ: ನೀರುಪಾಲಾದ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಸುಳಿವು ಅಲಭ್ಯ
ಸುಳ್ಯ : ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ ಆರಂಭಗೊಂಡರರೂ ಕಾರ್ಮಿಕನ ಸುಳಿವು ಲಭ್ಯವಾಗಿಲ್ಲ.
ಎಸ್.ಡಿ.ಆರ್.ಎಫ್ ಹಾಗೂ ಅಗ್ನಿಶಾಮಕ ದಳ ತಂಡದ ಸುಮಾರು 15-20 ಮಂದಿ ಆಗಮಿಸಿ ಮೆಷಿನ್ ಬೋಟ್ ಬಳಸಿ ಹುಡುಕಾಟ ನಡೆಸಿದರು. ಸ್ಥಳೀಯ ಮುಳುಗು ತಜ್ಞರು ಆಗಮಿಸಿ ನೀರಿನಲ್ಲಿ ಮುಳುಗಿ ಹುಡುಕಾಟ ನಡೆಸಿದರು. ಸ್ಥಳಕ್ಕೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಕುಮಾರ್ ಭೇಟಿ ನೀಡಿದ್ದಾರೆ.
ಸುಳ್ಯತಹಶಿಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಸಬ್ ಇನ್ಸ್ ಪೆಕ್ಟರ್ ಈರಯ್ಯ ದೂಂತೂರು,ಕಂದಾಯ ಇಲಾಖೆಯ ನಾರಾಯಣ ಸ್ಥಳೀಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಬೆಳಗ್ಗಿನಿಂದ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸತೊಡಗಿದ್ದರು.
ಶುಕ್ರವಾರದ ಶೋಧ ಕಾರ್ಯವನ್ನು ಸಂಜೆ ತನಕ ಮುಂದುವರಿಸಿ ಶನಿವಾರಕ್ಕೆ ಮುಂದೂಡಲಾಗಿದೆ.