ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಬ್ಯಾಂಕ್ ಮ್ಯಾನೇಜರ್, ಪತಿ, ಇಬ್ಬರು ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp
allwyn 080723 ksgd

ಕಾಸರಗೋಡು, ಜು 8 : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ಮ್ಯಾನೇಜರ್‌ ಶೀನಾ (35), ಅವರ ಪತಿ ಸಬೀಶ್ (37), ಮಕ್ಕಳಾದ ಹರಿಗೋವಿಂದ್ (6), ಮತ್ತು ಶ್ರೀವರ್ಧನ್ (2.5) ಎಂದು ಗುರುತಿಸಲಾಗಿದೆ. ಶೀನಾ ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು

ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಶೀನಾ ಕೆಲವು ದಿನಗಳ ಹಿಂದೆಯಷ್ಟೇ ಎಸ್‌ಬಿಐಯ ಕಾಸರಗೋಡು ಶಾಖೆಗೆ ವರ್ಗಾವಣೆಗೊಂಡಿದ್ದರು.

ಸುಳ್ಯ: ನೀರುಪಾಲಾದ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಸುಳಿವು ಅಲಭ್ಯ

ಸುಳ್ಯ : ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ‌ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ ಆರಂಭಗೊಂಡರರೂ ಕಾರ್ಮಿಕನ‌ ಸುಳಿವು ಲಭ್ಯವಾಗಿಲ್ಲ.

ಎಸ್.ಡಿ.ಆರ್.ಎಫ್ ಹಾಗೂ ಅಗ್ನಿಶಾಮಕ ದಳ ತಂಡದ ಸುಮಾರು 15-20 ಮಂದಿ ಆಗಮಿಸಿ ಮೆಷಿನ್ ಬೋಟ್ ಬಳಸಿ‌ ಹುಡುಕಾಟ ನಡೆಸಿದರು. ಸ್ಥಳೀಯ ಮುಳುಗು ತಜ್ಞರು ಆಗಮಿಸಿ ನೀರಿನಲ್ಲಿ ಮುಳುಗಿ ಹುಡುಕಾಟ ನಡೆಸಿದರು. ಸ್ಥಳಕ್ಕೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಕುಮಾರ್ ಭೇಟಿ ನೀಡಿದ್ದಾರೆ.

ಸುಳ್ಯತಹಶಿಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಸಬ್ ಇನ್ಸ್ ಪೆಕ್ಟರ್ ಈರಯ್ಯ ದೂಂತೂರು‌,ಕಂದಾಯ ಇಲಾಖೆಯ ನಾರಾಯಣ ಸ್ಥಳೀಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಬೆಳಗ್ಗಿನಿಂದ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸತೊಡಗಿದ್ದರು.

ಶುಕ್ರವಾರದ ಶೋಧ ಕಾರ್ಯವನ್ನು ಸಂಜೆ ತನಕ ಮುಂದುವರಿಸಿ ಶನಿವಾರಕ್ಕೆ ಮುಂದೂಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ