ಕಾಸರಗೋಡು: ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
Twitter
Facebook
LinkedIn
WhatsApp
ಕಾಸರಗೋಡು, ಮಾ 21 : ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.
ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ ಘಟನೆ ನಡೆದಿದೆ. ಕೆಲಸ ಮುಗಿಸಿ ತಾಯಿ ಸುಜಾತಾ ಸಂಜೆ ಮನೆಗೆ ಬಂದಾಗ ಶರಣ್ಯ ನಾಪತ್ತೆಯಾಗಿದ್ದು, ಕಿಟಿಕಿ ಮೂಲಕ ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಂಚದಲ್ಲಿ ಕುಳಿತುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ಕೋಣೆಯ ಬಾಗಿಲು ಮುಚ್ಚಿದ ಸ್ಥಿತಿಯಲ್ಲಿತ್ತು. ಕೂಡಲೇ ಪರಿಸರವಾಸಿಗಳಿಗೆ ಮಾಹಿತಿ ನೀಡಿದ್ದು, ಪರಿಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.