ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

Twitter
Facebook
LinkedIn
WhatsApp
ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

ಮಂಗಳೂರು: ದೀಪಾವಳಿ (Deepavali) ಬಂತೆಂದರೆ ತುಳುನಾಡಿನ ಮನೆಮುಂದೆಲ್ಲಾ ಬೆಳಗುತ್ತಿದ್ದ ಗೂಡುದೀಪಗಳು(ಆಕಾಶಬುಟ್ಟಿ) ಇಂದು ಆ ದೇವಸ್ಥಾನದ ಮುಂದೆಯೂ ಸಹಸ್ರಾರು ಸಂಖ್ಯೆಯಲ್ಲಿ ಕಂಗೊಳಿಸುತ್ತಿತ್ತು. ಒಂದನ್ನೊಂದು ಮೀರಿಸುವ ಆ ಗೂಡುದೀಪಗಳು ಜನರನ್ನು ತನ್ನತ್ತ ಸೆಳೆಯುತ್ತಿತ್ತು. ಗೂಡುದೀಪಗಳ ತಯಾರಕರಂತೂ ನನ್ನ ಗೂಡುದೀಪ ಚೆನ್ನಾಗಿದೆ ಎಂದು ಮೀಸೆ ತಿರುಗಿಸುತ್ತಿದ್ದರು.

ವಾವ್.. ಒಂದಕ್ಕಿಂತ ಒಂದು ಚೆಂದ. ಈ ರೀತಿ ಸುಂದರವಾಗಿ ಕಂಗೊಳಿಸುತ್ತಿರುವ ಇಂತಹ ಗೂಡುದೀಪಗಳು ಹಿಂದಿನ ಕಾಲದಲ್ಲಿ ತುಳುನಾಡಿನ ಪ್ರತೀ ಮನೆ ಮುಂದೆಯೂ ಇತ್ತು. ಮನೆ ಮಂದಿಯೆಲ್ಲಾ ಸೇರಿ ಇಂತಹ ಸುಂದರವಾದ ಗೂಡುದೀಪಗಳನ್ನು ತಯಾರಿಸುತ್ತಿದ್ದರು. ದೀಪಗಳ ಜೊತೆಗೆ ಈ ಗೂಡುದೀಪವೂ ಮೆರುಗು ನೀಡುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆಲ್ಲ ಯಾರಿಗೂ ಪುರುಸೋತ್ತಿಲ್ಲದೆ, ಕೆಲವರು ಅಂಗಡಿಗಳಲ್ಲಿ ಸಿಗುವ ರೆಡಿಮೆಡ್ ಗೂಡುದೀಪಗಳನ್ನು ತಂದರೆ, ಇನ್ನು ಕೆಲವರು ಗೂಡುದೀಪಗಳನ್ನು ಹಾಕುವ ಸಂಪ್ರದಾಯವನ್ನೇ ಮರೆತಿದ್ದಾರೆ. ಹೀಗಾಗಿ ಈ ಗೂಡುದೀಪಗಳು ಇನ್ನೂ ಉಳಿಯಬೇಕು ಜೊತೆಗೆ ಯುವಕರಲ್ಲೂ ಈ ಗೂಡುದೀಪ (Gududeepa) ಗಳ ಬಗ್ಗೆ ಆಸಕ್ತಿ ಬರಬೇಕು ಅನ್ನುವ ನಿಟ್ಟಿನಲ್ಲಿ ಮಂಗಳೂರಿನ ಸ್ಥಳೀಯ ಸುದ್ದಿವಾಹಿನಿ ಕಳೆದ 20 ವರ್ಷಗಳಿಂದ ಗೂಡುದೀಪ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಕ್ಷೇತ್ರದ ಸಹಯೋಗದೊಂದಿಗೆ ಈ ಗೂಡುದೀಪ ಸ್ಫರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆ 3 ವಿಭಾಗಳಾದ ಸಾಂಪ್ರದಾಯಿಕ, ಆಧುನಿಕ ಹಾಗೂ ಮೋಡೆಲ್ ವಿಭಾಗದಲ್ಲಿ ನಡೆಯುತ್ತಿದ್ದು ಎಲ್ಲರಿಗೂ ಮುಕ್ತ ಅವಕಾಶ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಿಂದ ಸ್ಪರ್ಧಾಳುಗಳು ತಮ್ಮ ಗೂಡು ದೀಪಗಳೊಂದಿಗೆ ಬಂದು ಇಲ್ಲಿ ಪ್ರದರ್ಶನಕ್ಕಿಡುತ್ತಾರೆ. ಇಲ್ಲಿರುವ ಪ್ರತಿಯೊಂದು ಗೂಡುದೀಪವೂ ವಿಭಿನ್ನವಾಗಿದೆ. ದಿನ ಬಳಕೆಯ ವಸ್ತುಗಳು ಕಲಾಕಾರನ ಕೈಯಲ್ಲಿ ಜೀವ ಪಡೆದಿದೆ. ಕಾಂತಾರ ಚಿತ್ರದ ಶೈಲಿಯ ಗೂಡುದೀಪ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. 

ಈ ಗೂಡದೀಪ ಸ್ಫರ್ಧೆಯನ್ನು ನೋಡಿದವರಂತು ನಾವು ಮುಂದಿನ ದಿನಗಳಲ್ಲಿ ಗೂಡುದೀಪಗಳನ್ನು ತಯಾರಿಸಬೇಕೆಂದರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರೆ, ಮೂರು ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಚಿನ್ನದ ಪದಕ ನೀಡಲಾಯಿತು. ಒಟ್ಟಿನಲ್ಲಿ ಅವನತಿಯತ್ತ ಸಾಗುತ್ತಿರುವ ಈ ಗೂಡುದೀಪಗಳನ್ನು ಈ ರೀತಿಯ ಸ್ಪರ್ಧೆ ಮಾಡಿಯಾದರೂ ಉಳಿಸಿಕೊಳ್ಳಬೇಕೆನ್ನುವ ಸಂಘಟಕರ ಪ್ರಯತ್ನಕ್ಕೆ ಎಲ್ಲರೂ ಸೈ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist