ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುರ್ಚಿಗಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

Twitter
Facebook
LinkedIn
WhatsApp
ಕುರ್ಚಿಗಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕುರ್ಚಿಗಾಗಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಕುರ್ಚಿಗಾಗಿ ಆರ್‍ಎಸ್‍ಎಸ್ ಕೈಗೊಂಬೆಯಾಗಿದ್ದಾರೆ. ಅವರ ತಂದೆ ಎಸ್.ಆರ್ ಬೊಮ್ಮಾಯಿ ಹೀಗಿರಲಿಲ್ಲ. ಅವರು ವಿಶಾಲ ಮನಸ್ಥಿತಿ ಹೊಂದಿದ್ದರು. ಆದರೆ, ಸಿಎಂ ಆರ್‌ಎಸ್‍ಎಸ್ ತಾಳಕ್ಕೆ ಕುಣಿಯುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಮೂವರ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗೃಹ ಸಚಿವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಖಾಕಿ ಬಗ್ಗೆ ಭಯನೂ ಇಲ್ಲ, ಗೌರವವೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಗುರುವಾರ ಸಿಎಂ ಪ್ರವೀಣ್ ಸಂತಾಪಕ್ಕೆ ತೆರಳಿದ್ದರು. ನಂತರ ಕೆಲವೇ ಗಂಟೆಗಳಲ್ಲಿ ಮತ್ತೊಂದು ಕೊಲೆಯಾಗುತ್ತದೆ ಅಂದರೆ ಇದರಲ್ಲಿ ಗುಪ್ತಚರ ಸಂಪೂರ್ಣ ವಿಫಲವಾಗಿದೆ. ಖಾಕಿ ಬಗ್ಗೆ ಭಯ ಇದೆ ಅಂತಾ ಹೇಳಲು ಆಗುತ್ತಿದೆಯಾ? ಎಸ್‍ಡಿಪಿಐ, ಪಿಎಫ್‍ಐರನ್ನು ಬೆಳೆಸುತ್ತಿರುವುದು ಬಿಜೆಪಿಯೇ. ಇದನ್ನು ಸ್ವತಃ ಆರ್‌ಎಸ್‍ಎಸ್‍ನ ಪ್ರಮುಖರು ಹೇಳುತ್ತಿದ್ದಾರೆ. ಇವರು ಕಾಂಗ್ರೆಸ್‍ಗೆ ಉತ್ತರ ಕೊಡುವುದು ಬೇಡ. ಅವರದೇ ಪಕ್ಷದ ಕಾರ್ಯಕರಿಗೆ ಉತ್ತರಿಸಲಿ ಎಂದಿದ್ದಾರೆ

ಸರ್ಕಾರದಿಂದ ಪರಿಹಾರ ನೀಡಿಕೆಗೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದಿಂದ ಈಗ 25 ಲಕ್ಷ ಪರಿಹಾರ ಕೊಡುತ್ತಿದ್ದಾರೆ. ಪರಿಹಾರ ಕೊಡುವುದಿದ್ದರೆ ಎಲ್ಲರಿಗೂ ಕೊಡಲಿ. ಇದರಲ್ಲಿ ತಾರತಮ್ಯ ಏಕೆ? ಅಷ್ಟಕ್ಕೂ ಇದನ್ನು ಯಾವುದರಿಂದ ಕೊಡುತ್ತಿದ್ದಾರೆ.

ಕೊರೊನಾ ಫಂಡ್‍ನಿಂದ ಪರಿಹಾರ ಕೊಡುತ್ತಿದೆ. ಕೊರೊನಾದಿಂದ ಮೃತರಾದವರಿಗೆ ಕೊಡುವ ಹಣದಿಂದ ಕೊಡುತ್ತಿದ್ದೀರಾ? ಹಾಗಾದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಏನಾಯಿತು? ಹರ್ಷ ಕುಟುಂಬಕ್ಕೆ ಕೊರೊನಾ ಫಂಡ್‍ನಿಂದ ಪರಿಹಾರ ನೀಡಿದ್ದರು. ನಿನ್ನೆ ಪ್ರವೀಣ್ ಕುಟುಂಬಕ್ಕೆ ಯಾವ ಫಂಡ್‍ನಿಂದ ಕೊಟ್ಟರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‍ನ್ನ ಸೋಲಿಸಲಿ ಪಿಎಫ್‍ಐ, ಎಸ್‍ಡಿಪಿಐಗೆ ಫಂಡ್ ಮಾಡುತ್ತಾರೆಂದು ಆರ್‌ಎಸ್‍ಎಸ್‍ನವರೇ ಹೇಳುತ್ತಿದ್ದಾರೆ. ಯಾರು ಯಾರನ್ನು ಸಾಕುತ್ತಿದ್ದಾರೆ ಎಂಬುದಕ್ಕೆ ಮೊದಲು ಅವರೇ ಉತ್ತರ ಕೊಡಲಿ. ಯಾವಾಗ ಬೇಕೋ ಆಗ ಬಳಸಿಕೊಳ್ಳುತ್ತಿದ್ದಾರೆ. ಇದು ನಾವು ಸಾಕಿದ ಗಿಣಿಯೇ ಪ್ರಶ್ನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ