ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುವೆಂಪು, ನಾಡಗೀತೆಗೆ ಅವಮಾನ ಖಂಡಿಸಿ ಹಂಪ ನಾಗರಾಜಯ್ಯ ರಾಜಿನಾಮೆ

Twitter
Facebook
LinkedIn
WhatsApp
ಕುವೆಂಪು, ನಾಡಗೀತೆಗೆ ಅವಮಾನ ಖಂಡಿಸಿ ಹಂಪ ನಾಗರಾಜಯ್ಯ ರಾಜಿನಾಮೆ
 

ಬೆಂಗಳೂರು: ನಾಡಗೀತೆಗೆ ಹಾಗೂ ಅದನ್ನು ಬರೆದ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿ ಹಂಪ ನಾಗರಾಜಯ್ಯ ಅವರು ಸೋಮವಾರ ರಾಜಿನಾಮೆ ನೀಡಿದ್ದಾರೆ.

ಈ ಸಂಬಂಧ ಅವರು ಇಂದು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಅದರ ಪೂರ್ಣಪಠ್ಯ ಮುಂದಿದೆ.  ತಮ್ಮ ಅಮೂಲ್ಯ ಕೃತಿಗಳಿಂದ  ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನು ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ “ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ”ವನ್ನು ಪ್ರಾರಂಭಿಸಿತಲ್ಲದೇ ಅತ್ಯುನ್ನತ “ಕರ್ನಾಟಕ ರತ್ನ” ಪ್ರಶಸ್ತಿಯನ್ನಿತ್ತು ಗೌರವಿಸಿತು.

 

ಆದರೆ ಇಂದು ಕುವೆಂಪು ಅವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ. ಇದರಿಂದ ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರ್ಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಅವಕಾಶಗಳಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.

ರಾಷ್ಟ್ರಕವಿ ಕುವೆಂಪು ಅವರನ್ನೂ, ನಮ್ಮ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ, ಸದಸ್ಯತ್ವಕ್ಕೂ ನನ್ನ ರಾಜಿನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ