ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಎನ್‌ಎಸ್‌ಯುಐ ಒತ್ತಾಯ

Twitter
Facebook
LinkedIn
WhatsApp
ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಎನ್‌ಎಸ್‌ಯುಐ ಒತ್ತಾಯ

ಚಿಕ್ಕಮಗಳೂರು:  ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ೪ ಮತ್ತು ೬ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಮುಖಂಡರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸಿ.ಕೆ.ಶ್ರೀಕಾಂತ್ ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿ, ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ೪ ಮತ್ತು ೬ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ೮ ರಿಂದ ೨೨ ರವರೆಗೆ ಪರೀಕ್ಷಾ ದಿನಾಂಕವನ್ನು ನಿಗಧಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಕಾಲೇಜುಗಳು ಪ್ರಾರಂಭವಾಗಿ ಎರಡು ತಿಂಗಳಾಗಿದ್ದು, ಕಾಲೇಜುಗಳಲ್ಲಿ ಉಪನ್ಯಾಸಕರು ಪಾಠಗಳನ್ನು ಸಮಯದ ಅಭಾವದಿಂದ ಪೂರ್ಣವಾಗಿ ಮುಗಿಸಿರುವುದಿಲ್ಲ. ಪಾಠಗಳೇ ಪೂರ್ಣಗೊಂಡಿಲ್ಲದೇ ಇರುವಾಗ ಪರೀಕ್ಷೆ ದಿನಾಂಕವನ್ನು ನಿಗಧಿಪಡಿಸಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುವುದಲ್ಲದೇ ಉತ್ತಮ ಫಲಿತಾಂಶಕ್ಕೂ ತೊಂದರೆಯಾಗುತ್ತದೆ ಎಂದಿದ್ದಾರೆ.

ಕಾಲೇಜಿನ ಪ್ರಿನ್ಸಿಪಾಲರನ್ನು ವಿಚಾರಿಸಿದಾಗ ಪಠ್ಯವನ್ನು ಪೂರ್ಣಗೊಳಿಸಲು ಕನಿಷ್ಠವೆಂದರೆ ಒಂದು ತಿಂಗಳ ಅವಧಿ ಬೇಕಾಗಿದೆ. ಈವರೆವಿಗೂ ಒಂದು ಇಂಟರ್‌ರ್ನಲ್ ಮುಗಿಸಲಾಗಿದೆ ಇನ್ನು ಒಂದು ಬಾಕಿ ಇದೆ. ಎಲ್ಲಾ ತರಗತಿಗಳನ್ನು ಆಗಸ್ಟ್ ೩೦ ರೊಳಗೆ ಮುಗಿಸುವಂತೆ ಕುವೆಂಪು ವಿಶ್ವವಿದ್ಯಾಲಯದಿಂದ ಆದೇಶ ಬಂದಿದೆ ಎಂದು ತಿಳಿಸಿದ್ದಾರೆ.

ಪಾಠಗಳು ಪೂರ್ಣ ಪ್ರಮಾಣದಲ್ಲಿ ನಡೆಯದೇ ಇರುವ ಕಾರಣ ೪ ಮತ್ತು ೬ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಿ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅನುಕೂಲ ಕಲ್ಪಿಸಲಾಗಿದೆ ಆದ್ದರಿಂದ ತಾವು ಕೂಡ ಕುವೆಂಪು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಅವಧಿಯನ್ನು ಮುಂದಿನ ಕನಿಷ್ಠ ಒಂದು ತಿಂಗಳ ಅವಧಿಗೆ ಮುಂದೂಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಜಿಲ್ಲಾ ಉಪಾಧ್ಯಕ್ಷರಾದ ದರ್ಶನ್, ಪ್ರಜ್ವಲ್, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್, ದೃವಕುಮಾರ್, ಹರ್ಷಿತ್, ತಾಲ್ಲೂಕು ಅಧ್ಯಕ್ಷರಾದ ಸುಮಂತ್ ಬಿ.ಟಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಅಫಾನ್, ತರೀಕೆರೆ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಗೋಪಾಲ್, ಚೇತನ್, ಯೋಗೀಶ್, ಬಾಲಾಜಿ, ವಿನಯ್, ನಮಾನ್ ಗೌಡ, ಸುನೀಲ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ