ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

Twitter
Facebook
LinkedIn
WhatsApp
ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ನವದೆಹಲಿ: ಬೌದ್ಧ ಯಾತ್ರೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಉತ್ತರಪ್ರದೇಶದಲ್ಲಿ ಇಂದು ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ವಿಮಾನ ನಿಲ್ದಾಣವು ಬೌದ್ಧ ಸರ್ಕ್ಯೂಟ್‌ನಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ಪುರಾತನ ನಗರವಾದ ಕುಶಿನಗರವು ಗೌತಮ ಬುದ್ಧನ ಅಂತಿಮ ವಿಶ್ರಾಂತಿಯ ಸ್ಥಳವಾಗಿದೆ. ಅಲ್ಲಿ ಮರಣದ ನಂತರ ಬುದ್ಧ ಮಹಾಪರಿನಿರ್ವಾಣವನ್ನು ಪಡೆದನು ಎಂದು ಹೇಳಲಾಗಿದೆ.
“ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ದಶಕಗಳ ಆಕಾಂಕ್ಷೆ ಮತ್ತು ಪ್ರಯತ್ನದ ಫಲಿತಾಂಶವಾಗಿದೆ. ನನ್ನ ಸಂತೋಷವು ಇಂದು ಎರಡು ಪಟ್ಟು ಹೆಚ್ಚಾಗಿದೆ. ಇದು ಪೂರ್ವಾಂಚಲ ಜನರ ಮೇಲಿನ ಬದ್ಧತೆಯನ್ನು ಪೂರೈಸುವ ಕ್ಷಣ” ಎಂದು ಕುಶಿನಗರ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಹೇಳಿದರು.

ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ ವಾಯು ಸಂಪರ್ಕದ ವಿಧಾನವಾಗಿರುವುದಿಲ್ಲ, ಬದಲಾಗಿ ಇದು ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.
ಕುಶಿನಗರದ ಅಭಿವೃದ್ಧಿಯು ಉತ್ತರ ಪ್ರದೇಶ ಸರ್ಕಾರ ಹಾಗೂ ಕೇಂದ್ರಕ್ಕೆ ಆದ್ಯತೆಯಾಗಿದೆ ಎಂದು ಪ್ರಧಾನಿ ಹೇಳಿದರು. ಈ ನಿಟ್ಟಿನಲ್ಲಿ, ಭಗವಾನ್ ಬುದ್ಧನಿಗೆ ಸಂಬಂಧಿಸಿದ ಸ್ಥಳಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಬೌದ್ಧ ಭಕ್ತರಿಗೆ ಸೌಲಭ್ಯಗಳನ್ನು ಸೃಷ್ಟಿಸಲು ವಿಶೇಷ ಗಮನ ನೀಡಲಾಗುತ್ತಿದೆ ಎಂದಿದ್ದಾರೆ.

ರಾಷ್ಟ್ರೀಯ ವಿಮಾನಯಾನ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಇತ್ತೀಚೆಗೆ ಮಾರಾಟ ಮಾಡಿದ್ದನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಈ ಕ್ರಮವು ಭಾರತದ ವಾಯುಯಾನ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತದೆ ಎಂದು ಹೇಳಿದರು. “ದೇಶದ ವಾಯುಯಾನ ಕ್ಷೇತ್ರವು ವೃತ್ತಿಪರವಾಗಿ ನಡೆಯಬೇಕು, ಅನುಕೂಲತೆ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು” ಎಂದು ಅವರು ಅಭಿಪ್ರಾಯಿಸಿದ್ದಾರೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀಲಂಕಾದ ಸಂಪುಟ ಸಚಿವ ನಮಲ್ ರಾಜಪಕ್ಸೆ ನೇತೃತ್ವದ 130-ಸದಸ್ಯರ ನಿಯೋಗವು ಉದ್ಘಾಟನಾ ಸಮಾರಂಭದಲ್ಲಿ ಹಾಜರಿದ್ದರು.
ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆಯು ಶ್ರೀಲಂಕಾದ ಕೊಲಂಬೊದಿಂದ ಉದ್ಘಾಟನಾ ವಿಮಾನ ಬಂದು ಇಳಿಯುವ ಮೂಲಕ ನೆರವೇರಿಸಲ್ಪಟ್ಟಿತು, ಶ್ರೀಲಂಕಾದ ನಿಯೋಗದಲ್ಲಿ 100 ಕ್ಕೂ ಹೆಚ್ಚು ಬೌದ್ಧ ಸನ್ಯಾಸಿಗಳು ಮತ್ತು ಗಣ್ಯರು ಇದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು