ಬೆಂಗಳೂರು: ಗೃಹ ಬಳಕೆ ಮತ್ತು ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ನೀಡಿದ್ದು, ವಿದ್ಯುತ್ ವ್ಯತ್ಯಯವಾದಲ್ಲಿ ವಲಯ ಮುಖ್ಯ ಇಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸುನಿಲ್ ಕುಮಾರ್ ಅವರು, ಕೃಷಿ ಪಂಪ್ಸೆಟ್ ಫೀಡರ್ ಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ತ್ರಿಫೇಸ್ ಮತ್ತು ಗೃಹಬಳಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ ಮುಖ್ಯ ಎಂಜಿನಿಯರ್ ಗಳನ್ನು ಹೊಣೆ ಮಾಡಿಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೇಸಿಗೆ ಅವಧಿಯಲ್ಲಿ ಗೃಹಬಳಕೆ, ವಾಣಿಜ್ಯ, ಕೈಗಾರಿಕೆ ಹಾಗೂ ಕೃಷಿ ಬಳಕೆಗಾಗಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಎಸ್ಕಾಂಗಳ ವ್ಯಾಪ್ತಿಯಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರತಿದಿನ ಬೆಳಗ್ಗೆ 11 ಗಂಟೆಗೆ ಮಾಹಿತಿ ಸಂಗ್ರಹಿಸಿ ನಿವಾರಿಸಲು ಪರಿಹಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕರ್ತವ್ಯ ಲೋಪವೆಂದು ಪರಿಗಣಿಸಿ ವಲಯ ಇಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ನಿಯಮಾವಳಿ ಪ್ರಕಾರ 7 ಗಂಟೆ ತ್ರೀಫೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲವೆಂದು ರೈತರು ದೂರಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದು ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist