ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಮಗ ಸಾವು

Twitter
Facebook
LinkedIn
WhatsApp
WhatsApp Image 2023 02 20 at 1.18.47 PM 1

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗನ ರಕ್ಷಿಸಲು ಹೋದ ತಾಯಿಯೂ ಮಗನ ಜೊತೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.

ಕೋಳೂರು ಗ್ರಾಮದ ರೂಪಾ (35) ಹಾಗೂ ಮಗ (Son) ಹೇಮಂತ್ (9) ಮೃತ ದುರ್ದೈವಿಗಳು. ತಾಯಿ (Mother), ಅಜ್ಜಿ ಜೊತೆ ಕುರಿ ಮೇಯಿಸಲು ಹೋಗಿದ್ದ. ಈ ವೇಳೆ ಬಾಲಕ ಹೇಮಂತ್ ಕೃಷಿ ಹೊಂಡದಲ್ಲಿ ಕೈ, ಕಾಲು ತೊಳೆಯಲು ಹೋದಾಗ ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾನೆ. ಈ ವೇಳೆ ಮಗ ಮುಳುಗಿದ್ದನ್ನ ಕಂಡ ತಾಯಿ ಆತನ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯೂ ಮಗನ ಜೊತೆ ನೀರಿನಲ್ಲಿ ಮುಳುಗಿದ್ದಾಳೆ. ಅಲ್ಲೇ ಇದ್ದ ಅಜ್ಜಿ ಸಹ ರಕ್ಷಣೆಗೆ ಮುಂದಾಗಿದ್ದು, ಆಕೆಯೂ ಇನ್ನೇನು ಮುಳುಗಿ ಹೋಗಬೇಕು ಅನ್ನವಷ್ಟರಲ್ಲಿ ಅಲ್ಲಿದ್ದ ಬಾಲಕಿಯೋರ್ವಳು ಆಕೆಗೆ ಡ್ರಿಪ್ ಪೈಪ್‌ ನೀಡಿ ಸಹಾಯ ಮಾಡಿದ್ದಾಳೆ.

ಘಟನೆಯಲ್ಲಿ ತಾಯಿ, ಮಗ ದಾರುಣ ಸಾವನ್ನಪ್ಪಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನ ಹೊರತೆಗೆದಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಮೃತರ ಕಣ್ಣುಗಳನ್ನು ದಾನ ಮಾಡಿ ಸಾವನಲ್ಲೂ ಸಹ ಸಾರ್ಥಕತೆ ಮೆರೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ