ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಎಲ್ ರಾಹುಲ್ - ಜಡೇಜಾ ಹೋರಾಟ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಜಯ

Twitter
Facebook
LinkedIn
WhatsApp
ಕೆಎಲ್ ರಾಹುಲ್ - ಜಡೇಜಾ ಹೋರಾಟ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಜಯ

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಾಳ್ಮೆಯ ಆಟವಾಡಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ. 

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡ ಭಾರತ ತಂಡವು ಏಕದಿನ ಸರಣಿಯನ್ನೂ ಗೆಲ್ಲಲು ಹೊರಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತಕ್ಕೆ 189 ರನ್‌ಗಳ ಗುರಿಯನ್ನು ನೀಡಿತ್ತು. ಭಾರತ ಈ ಗುರಿಯನ್ನು 39.5 ಓವರ್‌ಗಳಲ್ಲಿ 191 ರನ್ ಪೇರಿಸಿದೆ.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯ ತಂಡ 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟಾಯಿತು. ಮಿಚೆಲ್ ಮಾರ್ಷ್ ಕಾಂಗರೂಗಳ ಪರ ಗರಿಷ್ಠ 81 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಭಾರತ 39.5 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಕೆಎಲ್ ರಾಹುಲ್ ಲಯಕ್ಕೆ ಮರಳಿದ್ದು ಉತ್ತಮ ಬ್ಯಾಟಿಂಗ್ ಮಾಡಿ 91 ಎಸೆತಗಳಲ್ಲಿ 75 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು. ಇನ್ನು ರವೀಂದ್ರ ಜಡೇಜಾ ಕೂಡ 45 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಿಬ್ಬರ ನಡುವೆ ಆರನೇ ವಿಕೆಟ್‌ಗೆ 108 ರನ್‌ಗಳ ಅಜೇಯ ಜೊತೆಯಾಟವಿತ್ತು

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನು ಮುಂದಿನ ಏಕದಿನ ಪಂದ್ಯ ಭಾನುವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 16 ವರ್ಷಗಳ ನಂತರ ಆಸ್ಟ್ರೇಲಿಯಾವನ್ನು ಸೋಲಿಸಿದೆ.

ಈ ಮೈದಾನದಲ್ಲಿ ಇಬ್ಬರ ನಡುವೆ ಐದು ಏಕದಿನ ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ ಮೂರರಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯ ಎರಡು ಪಂದ್ಯಗಳನ್ನು ಗೆದ್ದಿದೆ. 2007ರಲ್ಲಿ ಈ ಮೈದಾನದಲ್ಲಿ ಭಾರತ ತಂಡ ಕೊನೆಯ ಬಾರಿಗೆ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಇದಾದ ಬಳಿಕ 2020ರಲ್ಲಿ ಆಸ್ಟ್ರೇಲಿಯಾ ಇದೇ ಮೈದಾನದಲ್ಲಿ ಭಾರತವನ್ನು ಸೋಲಿಸಿತ್ತು. ಇದೀಗ ಸುಮಾರು 16 ವರ್ಷಗಳ ನಂತರ ಭಾರತ ಮತ್ತೊಮ್ಮೆ ಆಸ್ಟ್ರೇಲಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ