ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಎಸ್​ಆರ್​ಟಿಸಿ -ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

Twitter
Facebook
LinkedIn
WhatsApp
Two died KSRTC Bus and Bike accident at Mudhol taluk in Bagalkot

ಬಾಗಲಕೋಟ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಕೆಎಸ್ ಆರ್ ಟಿಸಿ ಬಸ್  (KSRTC Bus) ಹಾಗೂ ಬೈಕ್ (Bike) ಮುಖಾಮುಖಿ ಡಿಕ್ಕಿಯಾಗಿ (Accident) ಬೈಕ್ ಮೇಲಿದ್ದ ಇಬ್ಬರೂ ಸ್ಥಳದಲ್ಲೇ ಕೊನೆಯಿಸಿರೆಳೆದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ (Mudhol) ತಾಲೂಕಿನ ಚಿಚಖಂಡಿ ಘಟಪ್ರಭಾ ಸೇತುವೆ ಮೇಲೆ ಈ ದುರಂತ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜು ಅಗಿದೆ.

ಬೈಕ್ ಮೇಲಿದ್ದ ಇಬ್ಬರೂ ರಕ್ತಸ್ರಾವದಿಂದ ಸಾವು 

ನಂಬರ್ ಪ್ಲೇಟ್ ಇಲ್ಲದ ಬೈಕ್ ಮೇಲಿದ್ದ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್ ಲೋಕಾಪುರದಿಂದ ಮುಧೋಳ ಮಾರ್ಗ ಹೊರಟಿತ್ತು. ಇನ್ನು ಬಸ್ ಮುಧೋಳದಿಂದ ಲೋಕಾಪುರ ಕಡೆ ಬರುತ್ತಿತ್ತು.

ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಬೈಕ್‌‌ ಸವಾರ ಸ್ಥಳದಲ್ಲೇ ಸಾವು:

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಬೈಕ್‌‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರ್ಗಿಯ ಸೇಡಂ ತಾಲೂಕಿನ ಬುರಗಪಲ್ಲಿ ನಿವಾಸಿ ಭೀಮಶಪ್ಪ (45) ಮೃತ ದುರ್ದೈವಿ. ಸ್ಥಳಕ್ಕೆ ಗುರುಮಠಕಲ್‌ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ