ಕೆಎಸ್ಆರ್ ಟಿಸಿ ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ; ಐವರಿಗೆ ಗಾಯ!
Twitter
Facebook
LinkedIn
WhatsApp

ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ನಡೆದಿದೆ.
ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ.
ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.