ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಜಿಎಫ್ ಸ್ಟಾರ್ ಯಶ್ ಜೊತೆ ಕಾಣಿಸಿಕೊಂಡ ಪಾಂಡ್ಯ ಬ್ರದರ್ಸ್

Twitter
Facebook
LinkedIn
WhatsApp
WhatsApp Image 2022 12 30 at 6.27.33 AM

ಮುಂಬೈ: ಟೀಂ ಇಂಡಿಯಾದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ರಾಕಿಂಗ್ ಸ್ಟಾರ್ ಯಶ್ ಜೊತೆ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ (KGF) ಖ್ಯಾತಿಯ ಸ್ಯಾಂಡಲ್‍ವುಡ್ ಸ್ಟಾರ್ ಜೊತೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ (Krunal Pandya) ಇಬ್ಬರು ಫೋಟೋ ತೆಗೆಸಿಕೊಂಡಿದ್ದು, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಜಿಎಫ್ 3 ಎಂದು ಬರೆದುಕೊಂಡು ಹಾರ್ದಿಕ್ ಪೋಸ್ಟ್ ಮಾಡಿದ್ದಾರೆ. ಇತ್ತ ಹಾರ್ದಿಕ್ ಪೋಸ್ಟ್ ಮಾಡುತ್ತಿದ್ದಂತೆ ಕೆಜಿಎಫ್ 3 ಟ್ರೆಂಡಿಂಗ್ ಆಗಿದೆ. ನೆಟ್ಟಿಗರು ಕಾಮೆಂಟ್‌ಗಳ ಸುರಿಮಳೆಗೈದಿದ್ದಾರೆ.

ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.

ಕೆಜಿಎಫ್ ಸರಣಿಯ ಚಿತ್ರಗಳಲ್ಲಿ ‘ರಾಕಿ ಭಾಯ್’ ಎಂದು ಕರೆಯಲ್ಪಡುವ ಯಶ್, ಹಾರ್ದಿಕ್ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ಭೇಟಿಯಾದರು. ಹಾರ್ದಿಕ್ ಅವರನ್ನು ಭೇಟಿಯಾದ ಖುಷಿಯನ್ನು ಮುಚ್ಚಿಡಲು ಸಾಧ್ಯವಾಗಲಿಲ್ಲ. ಅವರು ಇನ್ಸ್ಟಾಗ್ರಾಮ್ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಕೆಜಿಎಫ್-3” ಎಂಬ ಶೀರ್ಷಿಕೆ ಕೊಟ್ಟಿದ್ದು ಇದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಮೂರನೇ ಭಾಗವೂ ಬರುವ ನಿರೀಕ್ಷೆಯಿದೆ. ಕೆಜಿಎಫ್ ಮೂರನೇ ಭಾಗಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ನಿಯಮಿತ ನಾಯಕ ರೋಹಿತ್ ಗಾಯಗೊಂಡಿರುವ ಕಾರಣ ಹಾರ್ದಿಕ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.

ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಏಕದಿನ ತಂಡಕ್ಕೆ ಮರಳಿದ್ದಾರೆ. ಲೋಕೇಶ್ ರಾಹುಲ್ ತಂಡದಲ್ಲಿದ್ದರೂ ಉಪನಾಯಕನನ್ನಾಗಿ ಮಾಡಲಾಗಿದೆ. ಭಾರತದ ಭವಿಷ್ಯದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆಗಾರರು ನೋಡುತ್ತಿರುವುದು ಸ್ಪಷ್ಟವಾಗಿದೆ. ಟೆಸ್ಟ್ ತಂಡದಲ್ಲಿ ಪಾಂಡ್ಯಗೆ ಅವಕಾಶ ಸಿಗುತ್ತಿಲ್ಲವಾದರೂ, ಏಕದಿನ ಮತ್ತು ಟಿ20ಯಲ್ಲಿ ರೋಹಿತ್ ನಂತರ ಹಾರ್ದಿಕ್ ನಾಯಕನಾಗುವ ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ