ಬಹುನಿರೀಕ್ಷಿತ ‘ಕೆಜಿಎಫ್: ಚಾಪ್ಟರ್ 2’ (KGF Chapter 2) ಸಿನಿಮಾದಿಂದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗುತ್ತಿದೆ. ಈವರೆಗೂ ಕೇವಲ ಒಂದಷ್ಟು ಪೋಸ್ಟರ್ ಮತ್ತು ಒಂದು ಟೀಸರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಸಿನಿಮಾ ಈಗ ಮೊದಲ ಸಾಂಗ್ ಬಿಡುಗಡೆ ಮಾಡಿದೆ. ‘ತೂಫಾನ್..’ ಲಿರಿಕಲ್ ವಿಡಿಯೋ (Toofan Lyrical Video) ರಿಲೀಸ್ ಆಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಬಗ್ಗೆ ಎರಡು ದಿನ ಮುನ್ನವೇ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ತಿಳಿಸಲಾಗಿತ್ತು. ಆಗಲೇ ಜನರ ನಿರೀಕ್ಷೆ ಮುಗಿಲುಮುಟ್ಟಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ‘ಕೆಜಿಎಫ್ 2’ ಚಿತ್ರದಿಂದ ‘ತೂಫಾನ್..’ ಹಾಡು ಮೂಡಿಬಂದಿದೆ. ಸಾಂಗ್ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಾಡಿಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಯಶ್ (Yash) ಅವರನ್ನು ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ ಬಗ್ಗೆ ಹೈಪ್ ಸೃಷ್ಟಿ ಆಗಲು ಹಲವು ಕಾರಣಗಳಿವೆ. ‘ತೂಫಾನ್..’ ಲಿರಿಕಲ್ ಸಾಂಗ್ ಬಿಡುಗಡೆ ಆದ ಬಳಿಕ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಗ್ಗೆ ಇನ್ನಷ್ಟು ಟಾಕ್ ಹೆಚ್ಚಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist