ಶುಕ್ರವಾರ, ಮೇ 3, 2024
ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

Twitter
Facebook
LinkedIn
WhatsApp
sadhvi niranjan jyoti car accident

ವಿಜಯಪುರ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ (Sadhwi Niranjan Jyoti) ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರದ (Vijayapura) ಜುಮನಾಳ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ.

ವಿಜಯಪುರ‌-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡ ಕೇಂದ್ರ‌‌ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಹಾಗೂ ಕಾರು ಚಾಲಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.ವಿಜಯಪುರ ನಗರದಲ್ಲಿ ಗುರುವಾರ (ಮಾ.16) ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಾಧ್ವಿ ಅವರು ಭಾಗಿಯಾಗಿದ್ದರು. ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ‌ ಎನ್‌ಹೆಚ್ 50ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ನೀಡಿ ಟ್ರಾಫಿಕ್‌ ಜಾಮ್‌ ಕ್ಲಿಯರ್‌ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ