ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇದಾರನಾಥ ದೇವಾಲಯಕ್ಕೆ ಭೇಟಿ : 250 ಕೋಟಿ ರೂ.ಗಳ ಪುನರ್ ನಿರ್ಮಾಣ ಕಾರ್ಯ ಉದ್ಘಾಟಿಸಲಿರುವ ಮೋದಿ.

Twitter
Facebook
LinkedIn
WhatsApp
ಕೇದಾರನಾಥ ದೇವಾಲಯಕ್ಕೆ ಭೇಟಿ : 250 ಕೋಟಿ ರೂ.ಗಳ ಪುನರ್ ನಿರ್ಮಾಣ ಕಾರ್ಯ ಉದ್ಘಾಟಿಸಲಿರುವ ಮೋದಿ.

ದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 5ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಶ್ರೀ ಆದಿ ಶಂಕರಾಚಾರ್ಯರ ಪುನರ್ ನಿರ್ಮಾಣ ಸಮಾಧಿಯನ್ನು ಉದ್ಘಾಟಿಸಿ, ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಕೇದಾರಪುರಿಯಲ್ಲಿ 250 ಕೋಟಿ ರೂ.ಗಳ ಪುನರ್ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ಪವಿತ್ರ ದೇವಾಲಯವಾದ ಕೇದಾರನಾಥಕ್ಕೆ ಆಗಮಿಸಲಿದ್ದು ಅಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೆಳಿಗ್ಗೆ 8:35ಕ್ಕೆ ಅವರು ಆದಿ ಗುರು ಶಂಕರಾಚಾರ್ಯರ ಸಮಾಧಿಯ ಸ್ಥಳವನ್ನು ಉದ್ಘಾಟಿಸಲಿದ್ದಾರೆ. ಹಾಗೂ ಪುನರ್ ನಿರ್ಮಾಣಗೊಂಡ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ನಂತರ ಬೆಳಿಗ್ಗೆ 9.40 ಕ್ಕೆ ಪ್ರಧಾನಮಂತ್ರಿಯವರು ಕೇದಾರನಾಥದಲ್ಲಿ 130 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಪೂರ್ಣಗೊಂಡ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಶಂಕರಾಚಾರ್ಯರ ಸಮಾಧಿಯನ್ನು 2013 ರ ಪ್ರವಾಹದಲ್ಲಿ ನಾಶವಾದ ನಂತರ ಪುನರ್ ರಚಿಸಲಾಗಿದೆ. ಸಮಾಧಿಯ ಪುನರ್ ನಿರ್ಮಾಣವನ್ನು ಪ್ರಧಾನಿ ಕಾರ್ಯಾಲಯವು ತನ್ನ ಹೇಳಿಕೆಯಲ್ಲಿ ಮೋದಿ ಅವರ ಮಾರ್ಗದರ್ಶನದಲ್ಲಿ ಇಡೀ ಕೆಲಸವನ್ನು ಕೈಗೊಳ್ಳಲಾಗಿದೆ. ಅವರು ನಿರಂತರವಾಗಿ ಅದರ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ. ಪ್ರತಿಮೆಯ ಅನಾವರಣವನ್ನು 12 ಜ್ಯೋತಿರ್ಲಿಂಗಗಳು, 4 ಶಂಕರಾಚಾರ್ಯರ ಮಠಗಳು ಹಾಗೂ ಅವರ ಜನ್ಮಸ್ಥಳ ಮತ್ತು ಎಲ್ಲಾ ಶಿವಾಲಯಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಸಂಗಮ್ ಘಾಟ್, ಪ್ರಥಮ ಚಿಕಿತ್ಸೆ ಮತ್ತು ಪ್ರವಾಸಿ ಕೇಂದ್ರ ಸೌಲಭ್ಯ , ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ, ಮಂದಾಕಿನಿ ಆಸ್ತಾಪಥ್ ಸರದಿ ನಿರ್ವಹಣೆ ಮತ್ತು ಮಳೆ ಆಶ್ರಯ ಮತ್ತು ಸರಸ್ವತಿ ನಾಗರಿಕ ಅಮೆನಿಟಿ ಕಟ್ಟಡ ಸೇರಿದಂತೆ 180 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
“ಶತಮಾನಗಳಿಂದ ಕೇದಾರನಾಥದಲ್ಲಿ ಯಾರಿಂದಲೂ ಮಾಡಲಾಗದಿದ್ದದನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಅವರು ಕೇದಾರಪುರಿಯಲ್ಲಿ 250 ಕೋಟಿ ರೂ.ಗಳ ಪುನರ್ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸಲಿದ್ದು, ಎರಡನೇ ಹಂತದ ಪುನರ್ ನಿರ್ಮಾಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಜೊತೆಗೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಮೋದಿ ಅವರ ದೂರದೃಷ್ಟಿಯ ಪರಿಣಾಮವಾಗಿ ಕೇದಾರಪುರಿಯಲ್ಲಿ ನಡೆದ ಕಾರ್ಯವನ್ನು ವಿವರಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು